
ನವದೆಹಲಿ: ಆಹಾರ ಸಚಿವ ಕೆಎಚ್ ಮುನಿಯಪ್ಪ ನವದೆಹಲಿಯಲ್ಲಿ ಬಿಪಿಎಲ್ ಕಾರ್ಡ್ ಗೊಂದಲದ ಕುರಿತು ಮಾತನಾಡಿ ನವೆಂಬರ್ 28ರವೊಳಗೆ ಬಿಪಿಎಲ್ ಕಾರ್ಡ್ ಗೊಂದಲ ಸರಿಪಡಿಸಿ ಅಕ್ಕಿ ವಿತರಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.
ಮುಖ್ಯಮಂತ್ರಿಗಳ ಆದೇಶದಂತೆ ಎಲ್ಲಾ ಪಡಿತರ ಕಾರ್ಡುಗಳನ್ನು ಯಥಾವತ್ತಾಗಿ ಮುಂದುವರಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದ್ದು ನವೆಂಬರ್ 28ರ ವರೆಗೆ ಎಲ್ಲಾ ಪಡಿತರ ಕಾರ್ಡುಗಳನ್ನು ಸರಿಪಡಿಸಿ ಬಿಪಿಎಲ್ ಪಡಿತರ ಚೀಟಿದಾರರಿಗೆ ಎಲ್ಲಾ ಸೌಲಭ್ಯಗಳೊಂದಿಗೆ ಅಕ್ಕಿಯನ್ನು ವಿತರಿಸಲಿದ್ದೇವೆ ಎಂದು ಹೇಳಿದರು.
ತೆರಿಗೆ ಪಾವತಿದಾರರು ಮತ್ತು ಸರ್ಕಾರಿ ನೌಕರರ ಅನರ್ಹ ಪಡಿತರ ಕಾರ್ಡುಗಳನ್ನು ಎಪಿಎಲ್ ಗೆ ವರ್ಗಾಯಿಸಿ ಅರ್ಹ ಫಲಾನುಭವಿಗಳಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗುವುದು. ನಮ್ಮ ಸರ್ಕಾರ ಬಡವರ ಪರವಾಗಿದ್ದು ಸಿಎಂ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ಉತ್ತಮ ಯೋಜನೆಗಳೊಂದಿಗೆ ಜನರ ಅಭಿವೃದ್ಧಿಯನ್ನು ಮಾಡಲಾಗುತ್ತಿದೆ ಎಂದು ಹೇಳಿದರು



















