
ಮೂಡಾ ಹಗರಣ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆ ನಡೆಸಲು ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿದ್ದು, ಈ ವಿಚಾರವಾಗಿ ಸಿಎಂ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಸಿದೆ.
ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ, ರಾಜ್ಯಪಾಲರು ಹೀಗೆ ಮಾಡುತ್ತಾರೆ ಎನ್ನುವುದು ನಮಗೆ ಗೊತ್ತಿತ್ತು. ಈ ವಿಚಾರವಾಗಿ ನಾವು ಬೀದಿಗೆ ಇಳಿದು ಹೋರಾಟ ಮಾಡುತ್ತೇವೆ. ರಾಜ್ಯಪಾಲರೇ ಜನರ ಮುಂದೆ ಎಕ್ಸ್ ಪೋಸ್ ಆಗಿದ್ದಾರೆ. ಕೇಂದ್ರ ಸರಕಾರದ ಸೂಚನೆಯಂತೆ ರಾಜ್ಯಪಾಲರು ನಡೆದುಕೊಳ್ಳುತ್ತಿದ್ದಾರೆ ಎಂದು ದೂರಿದ್ದು, ನಾವು 135+1 ಸ್ಥಾನ ಗೆದ್ದಿದ್ದು ಅವರಿಂದ ಸಹಿಸಲಾಗುತ್ತಿಲ್ಲ. ಜನರ ಇಚ್ಛೆಯಂತೆ ಅವರ ಬೆಂಬಲದಿಂದ ಸರಕಾರ ರಚನೆಯಾಗಿದೆ. ಸರಕಾರವನ್ನು ಅಭದ್ರಗೊಳಿಸುವ ನಿಟ್ಟಿನಲ್ಲಿ ಷಡ್ಯಂತರ ನಡೆಸಲಾಗುತ್ತಿದೆ. ನಾನು ರಾಜೀನಾಮೆ ನೀಡುವ ಪ್ರಶ್ನೆ ಇಲ್ಲ. ರಾಜ್ಯಪಾಲರೇ ರಾಜೀನಾಮೆ ನೀಡಬೇಕು ಎಂದು ಸಿಎಂ ತಿಳಿಸಿದ್ದಾರೆ.













