
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿ ನಾನು ಯಾಕೆ ರಾಜೀನಾಮೆ ಕೊಡಲಿ. ನಾನು ಏನು ತಪ್ಪು ಮಾಡಿದ್ದೇನೆ ಹೇಳಿ. ನಾನು ಯಾವ ತಪ್ಪು ಮಾಡಿಲ್ಲ. ರಾಜೀನಾಮೆ ಪ್ರಶ್ನೆಗಳೇ ಬರುವುದಿಲ್ಲ. ನನ್ನ ಕಂಡರೇ ವಿಪಕ್ಷಗಳಿಗೆ ಭಯ. ಹೀಗಾಗಿ ಪದೇ ಪದೇ ನನ್ನ ಟಾರ್ಗೆಟ್ ಮಾಡುತ್ತಾರೆ ಎಂದು ವಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಇದು ನನ್ನ ಜೀವನದ ರಾಜಕೀಯ ಸಂಬಂಧದ ಮೊದಲ ಕೇಸ್. ಕಾನೂನು ಹೋರಾಟವನ್ನ ನಮ್ಮ ವಕೀಲರು ಮಾಡುತ್ತಾರೆ. ಇವತ್ತು ಅಪಾರ ಸಂಖ್ಯೆಯಲ್ಲಿ ಬೆಂಬಲಿಗರು ನನ್ನ ಸ್ವಾಗತಕ್ಕೆ ಬಂದಿದ್ದಾರೆ. ನಾನು ಯಾರನ್ನೂ ಕರೆದಿಲ್ಲ, ಅವರೇ ಪ್ರೀತಿಯಿಂದ ಬಂದಿದ್ದಾರೆ. ನನಗೆ ಯಾವ ಭಯವೂ ಇಲ್ಲ. ನಾನು ಭಯಗೊಂಡ ರೀತಿ ಕಾಣುತ್ತಿದ್ದೀನಾ? ಎಂದು ಪ್ರಶ್ನಿಸಿದ ಸಿಎಂ ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಎಸಿಬಿಯೇ ಇದೆ. ಇದಕ್ಕೆ ಯಾಕೆ ಕುಮಾರಸ್ವಾಮಿ ಮಾತನಾಡಲ್ಲ. ನಾನು ಲೋಕಾಯುಕ್ತವನ್ನ ಮುಚ್ಚಿಲ್ಲ. ಎಸಿಬಿ ರಚನೆ ಮಾಡಿದ್ದೇನೆ ಎಂದು ಹೇಳಿದ್ದಾರೆ.













