
ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷಕ್ಕೆ ಸೋಲು ಉಂಟಾಗಿದ್ದು, ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಈ ಬಗ್ಗೆ ಫಲಿತಾಂಶದ ನಂತರ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.
ನಾವು ಅತ್ಯಂತ ನಮ್ರತೆಯಿಂದ ಜನರ ಆದೇಶವನ್ನು ಸ್ವೀಕರಿಸುತ್ತೇವೆ. ಗೆಲುವು ಸಾಧಿಸಿದ ಬಿಜೆಪಿಯನ್ನು ಅಭಿನಂದಿಸುತ್ತೇನೆ ಎಂದಿದ್ದಾರೆ. ಜನರು ಅನೇಕ ಭರವಸೆಗಳನ್ನು ಇಟ್ಟುಕೊಂಡು ಬಿಜೆಪಿಗೆ ಬಹುಮತ ನೀಡಿದ್ದಾರೆ. ನಾವು ಕಳೆದ ಹತ್ತು ವರ್ಷಗಳಲ್ಲಿ ಶಿಕ್ಷಣ ,ಆರೋಗ್ಯ, ಕುಡಿಯುವ ನೀರು ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ಜನರಿಗೆ ಉತ್ತಮ ಸೇವೆ ಮಾಡಿದ್ದೇವೆ. ಇನ್ನು ಸಮರ್ಥ ಪ್ರತಿಪಕ್ಷವಾಗಿ ನಮ್ಮ ಕಾರ್ಯ ನಿರ್ವಹಿಸಲಿದ್ದೇವೆ. ಹಾಗೂ ಚುನಾವಣೆಯಲ್ಲಿ ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸಿದ ಆಮ್ ಆದ್ಮಿ ಪಕ್ಷದ ಎಲ್ಲಾ ಕಾರ್ಯಕರ್ತರಿಗೆ ಅಭಿನಂದನೆಗಳು ಎಂದಿದ್ದಾರೆ.




















