
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಫರಂಗಿಪೇಟೆ ಕಿದೆಬೆಟ್ಟು ನಿವಾಸಿ, ವಿದ್ಯಾರ್ಥಿ ದಿಗಂತ್ ನಿಗೂಢವಾಗಿ ನಾಪತ್ತೆಯಾಗಿದ್ದು ನಿನ್ನೆಯಷ್ಟೇ ಆತ ಉಡುಪಿಯಲ್ಲಿ ಪತ್ತೆಯಾಗಿದ್ದು ಪೊಲೀಸರು ಕರೆತಂದಿದ್ದಾರೆ.
ಫೆಬ್ರವರಿ 25ರಂದು ನಾಪತ್ತೆಯಾಗಿದ್ದ ದಿಗಂತ್ ಬರೊಬ್ಬರಿ 10 ದಿನಗಳ ಬಳಿಕ ಉಡುಪಿಯಲ್ಲಿ ಪತ್ತೆಯಾಗಿದ್ದು ದಿಗಂತ್ ಪೋಷಕರು ನಿಟ್ಟುಸಿರು ಬಿಟ್ಟಿದ್ದಾರೆ.
ದ್ವಿತೀಯ ಪಿಯುಸಿ ಪರೀಕ್ಷೆ ಭಯದಿಂದ ಮನೆಬಿಟ್ಟು ಹೋಗಿರುವುದಾಗಿ ಪೊಲೀಸರಿಗೆ ದಿಗಂತ್ ತಿಳಿಸಿದ್ದಾನೆ. ನಾಪತ್ತೆಯಾದ ದಿನ ಮನೆ ಬಳಿ ರೈಲ್ವೆ ಟ್ರ್ಯಾಕ್ ಬಳಿ ಹೋಗಿದ್ದ ದಿಗಂತ್, ಅಲ್ಲಿ ಚಪ್ಪಲಿ ಬಿಚ್ಚಿಟ್ಟು ಶೂ ಹಾಕಿಕೊಂಡಿದ್ದಾರೆ. ಬಳಿಕ, ಅಪರಿಚಿತರ ಬೈಕ್ಏರಿ ಮಂಗಳೂರಿಗೆ ಹೋಗಿ ಅಲ್ಲಿಂದ ಶಿವಮೊಗ್ಗ ತಲುಪಿ, ಬಳಿಕ ಶಿವಮೊಗ್ಗದಿಂದ ಮೈಸೂರಿಗೆ ಹೋಗಿದ್ದಾರೆ. ಮೈಸೂರಿನಲ್ಲಿ ಟ್ರೈನ್ ಹತ್ತಿ ಬೆಂಗಳೂರಿಗೆ ಹೋಗಿದ್ದಾರೆ. ನಂದಿಬೆಟ್ಟಕ್ಕೆ ತೆರಳಿ, ಅಲ್ಲಿಯ ಹೊಟೇಲ್ ಒಂದರಲ್ಲಿ ಮೂರು ದಿನ ಕೆಲಸ ಮಾಡಿ 3000 ಸಂಪಾದನೆ ಮಾಡಿದ್ದಾರೆ. ನಂತರ ವಿವಿಧ ಕಡೆ ಸುತ್ತಾಟ ನಡೆಸಿ, ಮಾ.08 ರಂದು ಬೆಂಗಳೂರಿನಲ್ಲಿ ಮುರುಡೇಶ್ವರ ಎಕ್ಸ್‌ಪ್ರೆಸ್ ಟ್ರೈನ್ ಹತ್ತಿ ಉಡುಪಿಗೆ ತಲುಪಿದ್ದಾರೆ.



















