
ಬೆಂಗಳೂರು: ರಾಜ್ಯದಲ್ಲಿ ಪಿಜಿ ವೈದ್ಯಕೀಯ ಕೋರ್ಸುಗಳ ಪ್ರವೇಶಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ನೀಟ್‌ಪಿಜಿ-2024ಕ್ಕೆ ಪ್ರಾಧಿಕಾರದಲ್ಲಿ ಆನ್‌ಲೈನ್ ಮೂಲಕ ನೋಂದಣಿ ಮಾಡಿಕೊಳ್ಳಲು ಅ. 7ರ ಮಧ್ಯಾಹ್ನ 2.00 ರವರೆಗೆ ಕಾಲಾವಕಾಶವನ್ನು ವಿಸ್ತರಣೆ ಮಾಡಿದೆ.
ಇಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ಈ ಕುರಿತು ಮಾತನಾಡಿ ಇದುವರೆಗೆ ನೋಂದಣಿ ಮಾಡದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ ಶುಲ್ಕ ಪಾವತಿಸಿ ಪ್ರಕ್ರಿಯೆ ಪೂರ್ಣಗೊಳಿಸಬಹುದು ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶುಲ್ಕ ಪಾವತಿಸದಿರುವ ಅಭ್ಯರ್ಥಿಗಳಿಗೆ ಕೂಡ ಶುಲ್ಕ ಪಾವತಿಸಿ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಪೂರ್ಣಗೊಳಿಸಲು ಅವಕಾಶವಿದೆ. ನೋಂದಣಿ ಮಾಡಲು ಅಥವಾ ಶುಲ್ಕ ಪಾವತಿಸಲು ಮತ್ತೊಮ್ಮೆ ದಿನಾಂಕವನ್ನು ವಿಸ್ತರಿಸುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.













