25.1 C
Udupi
Monday, February 16, 2026
spot_img
spot_img
HomeBlogನೀಟ್ ಪರೀಕ್ಷೆಯ ವಿವಾದ ಹಿನ್ನೆಲೆಯಲ್ಲಿ 1563 ವಿದ್ಯಾರ್ಥಿಗಳಿಗೆ ನೀಡಲಾಗಿದ್ದ ಗ್ರೇಸ್ ಅಂಕ ರದ್ದು ಮಾಡಲು ನಿರ್ಧರಿಸಿದ...

ನೀಟ್ ಪರೀಕ್ಷೆಯ ವಿವಾದ ಹಿನ್ನೆಲೆಯಲ್ಲಿ 1563 ವಿದ್ಯಾರ್ಥಿಗಳಿಗೆ ನೀಡಲಾಗಿದ್ದ ಗ್ರೇಸ್ ಅಂಕ ರದ್ದು ಮಾಡಲು ನಿರ್ಧರಿಸಿದ ಕೇಂದ್ರ ಸರ್ಕಾರ

spot_imgspot_img

ನವದೆಹಲಿ: ನೀಟ್‌ ಯಜಿ ಪರೀಕ್ಷೆಯ ವಿವಾದವು ಇಡೀ ದೇಶದಲ್ಲಿ ಚರ್ಚೆಗೆ ಎಡೆ ಮಾಡಿಕೊಟ್ಟಿದ್ದು ಇದೀಗ ಕೇಂದ್ರ ಸರ್ಕಾರವು ಅಭ್ಯರ್ಥಿಗಳಿಗೆ ನೀಡಲಾಗಿದ್ದ ಗ್ರೇಸ್‌ ಅಂಕಗಳನ್ನು ರದ್ದುಗೊಳಿಸಲು ನಿರ್ಧರಿಸಿ ಈ ವಿದ್ಯಾರ್ಥಿಗಳಿಗೆ ಮರು ಪರೀಕ್ಷೆಯನ್ನು ತೆಗೆದುಕೊಳ್ಳಲು ಆಯ್ಕೆಯನ್ನು ನೀಡಲಾಗುತ್ತದೆ ಅಥವಾ ಗ್ರೇಸ್ ಅಂಕಗಳಿಲ್ಲದೆ ಪಡೆದ ಅಂಕಗಳ ಆಧಾರದ ಮೇಲೆ ಫಲಿತಾಂಶ ಪ್ರಕಟಿಸಲಾಗುತ್ತದೆ ಎಂದು ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.

ಸುಪ್ರೀಂ ಕೋರ್ಟ್ಗೆ ಸಲ್ಲಿಕೆಯಾಗಿರುವ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ನೀಟ್‌ ಅನ್ಯಾಯ ಸೇರಿದಂತೆ ಹಲವು ಅರ್ಜಿಗಳನ್ನು ಜುಲೈ 8 ರಂದು ವಿಚಾರಣೆ ನಡೆಸಲಾಗುವುದು ಎಂದು ತಿಳಿಸಿದೆ. ಜೂನ್ 23 ರಂದು ಮರುಪರೀಕ್ಷೆ ನಡೆಯುವ ಸಾಧ್ಯತೆಯಿದ್ದು, ಜುಲೈ 1 ರ ಮೊದಲು ಫಲಿತಾಂಶ ಹೊರಬೀಳಲಿದೆ ಎಂದು ಕೇಂದ್ರವು ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.

ಪರೀಕ್ಷಾ ಕೇಂದ್ರಗಳಲ್ಲಿ ಪ್ರಶ್ನೆಪತ್ರಿಕೆ ವಿಳಂಬಗೊಂಡು ಗ್ರೇಸ್‌ ಅಂಕ ಪಡೆದ ಅಭ್ಯರ್ಥಿಗಳಿಗೆ ಮಾತ್ರ ಮರು ಪರೀಕ್ಷೆಗೆ ಅವಕಾಶ ನೀಡಲಾಗುವುದು ಎಂದು ಕೋರ್ಟ್‌ ಸ್ಪಷ್ಟನೆ ನೀಡಿದೆ.

ವಿವಾದದ ಹಿನ್ನೆಲೆ:

ಈ ಬಾರಿ ನೀಟ್‌ ಪರೀಕ್ಷೆ ನಡೆದ 6 ಕೇಂದ್ರದಲ್ಲಿ ತಪ್ಪು ಪ್ರಶ್ನೆ ಪತ್ರಿಕೆಯನ್ನು ವಿತರಿಸಲಾಗಿತ್ತು. ಇದರಿಂದಾಗಿ ಅಭ್ಯರ್ಥಿಗಳು 45 ನಿಮಿಷಗಳನ್ನು ಕಳೆದುಕೊಳ್ಳವಂತಾಗಿತ್ತು. ಪರೀಕ್ಷೆ ಬರೆಯಲು ಕಡಿಮೆ ಸಮಯ ಸಿಕ್ಕಿದ್ದಕ್ಕೆ ಈ ಕೇಂದ್ರದ ವಿದ್ಯಾರ್ಥಿಗಳಿಗೆ ಎನ್‌ಟಿಎ ಗ್ರೇಸ್‌ಮಾರ್ಕ್‌ ನೀಡಿತ್ತು.

ಈ ಗ್ರೇಸ್‌ ಮಾರ್ಕ್‌ ಪರಿಣಾಮ ದಾಖಲೆಯ 67 ವಿದ್ಯಾರ್ಥಿಗಳು ಮೊದಲ ರ್‍ಯಾಂಕ್‌ ಪಡೆದಿದ್ದರು. ಈ ಪೈಕಿ ಬಹುತೇಕರು, ಮೇಘಾಲಯ, ಹರ್ಯಾಣದ ಬಹದುರ್ಗಾ, ಛತ್ತೀಸ್‌ಗಢ ದಂತೇವಾಡಾ, ಬಲ್ಡೋಹ್‌, ಗುಜರಾತ್‌ನ ಸೂರತ್‌ ಮತ್ತು ಚಂಡೀಗಢದ ಪರೀಕ್ಷಾ ಕೇಂದ್ರಗಳಿಗೆ ಸೇರಿದವರಾಗಿದ್ದಾರೆ. ಜೊತೆಗೆ ಅನುಕ್ರಮ ಸಂಖ್ಯೆಯಲ್ಲಿ 7 ಅಭ್ಯರ್ಥಿಗಳು ಮೊದಲ ರ್‍ಯಾಂಕ್‌ ಪಡೆದಿದ್ದಾರೆ.

6 ಪರೀಕ್ಷಾ ಕೇಂದ್ರಗಳ 1563 ನೀಟ್‌ ವಿದ್ಯಾರ್ಥಿಗಳಿಗೆ ಗ್ರೇಸ್‌ ಮಾರ್ಕ್ಸ್‌ ನೀಡಿ ಹೆಚ್ಚಿನ ಅಂಕ ಪಡೆದಿದ್ದೇ ವಿವಾದಕ್ಕೆ ಮುಖ್ಯ ಕಾರಣವಾಗಿತ್ತು. ಅಷ್ಟೇ ಅಲ್ಲದೇ ಜೂ.4ರಂದು ಯಾವುದೇ ಮುನ್ಸೂಚನೆ ನೀಡದೇ ಲೋಕಸಭಾ ಚುನಾವಣೆ ಫಲಿತಾಂಶದ ದಿನ ಸಂಜೆ ಏಕಾಏಕಿ ನೀಟ್‌ ಫಲಿತಾಂಶ ಪ್ರಕಟಿಸಲಾಗಿತ್ತು. ಇವೆಲ್ಲವೂ ಸಾಕಷ್ಟು ಅನುಮಾನ ಮೂಡಿತ್ತು. ದೇಶಾದ್ಯಂತ ನೀಟ್‌ ಪರೀಕ್ಷೆಯನ್ನು ರದ್ದುಗೊಳಿಸಬೇಕೆಂದು ಕೋರಿ ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು

spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page