
ಬೆಂಗಳೂರು: ದೇಶಾದ್ಯಂತ ನೀಟ್ ಪರೀಕ್ಷೆ ಮತ್ತು ಫಲಿತಾಂಶದಲ್ಲಿ ಅಕ್ರಮದ ಕುರಿತು ಭಾರಿ ಚರ್ಚೆಯಾಗುತ್ತಿದ್ದು, ಲಕ್ಷಾಂತರ ಯುವಕರು ತಮ್ಮ ಭವಿಷ್ಯ ಮಣ್ಣುಪಾಲಾಗುವ ಆತಂಕದಲ್ಲಿದ್ದಾರೆ. ಈ ಕುರಿತು ಆಕ್ರೋಶ ವ್ಯಕ್ತಪಡಿಸಿದ ಸಿಎಂ ಸಿದ್ದರಾಮಯ್ಯ ಪ್ರಧಾನಿ ಮೋದಿಯವರ ಸರ್ಕಾರ ರಚನೆ ಮತ್ತು ಸಂಸದರ ಖರೀದಿಯ ಕಸರತ್ತು ಮುಗಿದಿದ್ದರೆ ನೊಂದ ನೀಟ್ ಪರೀಕ್ಷಾರ್ಥಿಗಳ ಅಹವಾಲು ಆಲಿಸಲಿ. ನೀಟ್ ಪರೀಕ್ಷಾ ಅಕ್ರಮದ ಬಗ್ಗೆ ತನಿಖೆ ಮಾಡಿಸಲಿ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಆಗ್ರಹಿಸಿದ್ದಾರೆ.
ಈ ಕುರಿತು ಶುಕ್ರವಾರ ಪತ್ರಿಕಾ ಪ್ರಕಟಣೆ ನೀಡಿರುವ ಸಿಎಂ ಸಿದ್ದರಾಮಯ್ಯ ಅಕ್ರಮಗಳನ್ನು ಮುಚ್ಚಿಹಾಕುವ ಸಲುವಾಗಿಯೇ ಜೂ.4ರಂದು ಲೋಕಸಭೆ ಚುನಾವಣೆ ಫಲಿತಾಂಶ ಬರುವ ದಿನ ತರಾತುರಿಯಲ್ಲಿ ನೀಟ್ ಫಲಿತಾಂಶ ಪ್ರಕಟಿಸಿದ್ದೀರಾ ಎಂದು ಅವರು ಖಾರವಾಗಿ ಪ್ರಶ್ನಿಸಿದ್ದಾರೆ.