
ನವದೆಹಲಿ: ಬುಧವಾರ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ 2026ರ ನೀಟ್ ಪರೀಕ್ಷೆಯಲ್ಲಿ ಕೆಲ ಲೋಪದೋಷಗಳು ನಡೆದಿರುವುದನ್ನು ಒಪ್ಪಿಕೊಂಡಿದ್ದು ಈ ಕುರಿತು ಮಾತನಾಡಿದ ಅವರು, ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಿದ ಕೇಂದ್ರ ಸರ್ಕಾರ ತಕ್ಷಣ ಕ್ರಮ ಕೈಗೊಂಡು ಉಂಟಾದ ಸಮಸ್ಯೆಗಳನ್ನು ಸರಿಪಡಿಸಿದ್ದು, ಬಳಿಕ ನೀಟ್ ಮರುಪರೀಕ್ಷೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.
ಪರೀಕ್ಷೆ ರದ್ದಾದ ಬಳಿಕ ವಿದ್ಯಾರ್ಥಿಗಳ ಭವಿಷ್ಯಕ್ಕೆ ಯಾವುದೇ ಹಾನಿಯಾಗದಂತೆ ನೋಡಿಕೊಳ್ಳಬೇಕು ಎಂಬ ಸ್ಪಷ್ಟ ಸೂಚನೆಯನ್ನು ಪ್ರಧಾನಿ ನರೇಂದ್ರ ಮೋದಿ ನೀಡಿದ್ದರು ಎಂದು ಪ್ರಧಾನ್ ಮಾಹಿತಿ ನೀಡಿದ್ದಾರೆ.
ಪರೀಕ್ಷೆಯ ವೇಳೆ ಶಸ್ತ್ರಸಜ್ಜಿತ ಪಡೆಗಳನ್ನು ಬಳಸಿದ ವಿಚಾರವಾಗಿ ವಿಪಕ್ಷಗಳು ಟೀಕೆ ನಡೆಸಿದ್ದಕ್ಕೆ ಪ್ರತಿಕ್ರಿಯಿಸಿದ ಅವರು, ದೇಶದ ಯುವಕರ ಹಿತಕ್ಕಾಗಿ ವಾಯುಪಡೆ ಹಾಗೂ ಸಿಎಪಿಎಫ್ ಸೇವೆ ಬಳಸಿದರೆ ಅದರಲ್ಲಿ ತಪ್ಪೇನು ಎಂಬ ಪ್ರಶ್ನೆಯನ್ನು ಮುಂದಿಟ್ಟಿದ್ದಾರೆ.


































