23.9 C
Udupi
Tuesday, March 17, 2026
spot_img
spot_img
HomeBlog'ನೀವು ಕರ್ನಾಟಕದಲ್ಲಿದ್ದ ಮೇಲೆ ಸೂಚನಾ ಫಲಕಗಳನ್ನು ಕನ್ನಡದಲ್ಲಿ ಪ್ರದರ್ಶಿಸಲೇಬೇಕು': ಹೈಕೋರ್ಟ್

‘ನೀವು ಕರ್ನಾಟಕದಲ್ಲಿದ್ದ ಮೇಲೆ ಸೂಚನಾ ಫಲಕಗಳನ್ನು ಕನ್ನಡದಲ್ಲಿ ಪ್ರದರ್ಶಿಸಲೇಬೇಕು’: ಹೈಕೋರ್ಟ್

ಬೆಂಗಳೂರು: ಬಿಬಿಎಂಪಿ ಯು ‘ವಾಣಿಜ್ಯ, ವ್ಯವಹಾರ ನಡೆಸುವ ಅಂಗಡಿಗಳ ಮುಂದಿನ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡವನ್ನು ಕಡ್ಡಾಯವಾಗಿ ಬಳಕೆ ಮಾಡಬೇಕು ಎಂದು ಸುತ್ತೋಲೆ ಹೊರಡಿಸಿದ್ದು ಇದನ್ನು ಪ್ರಶ್ನಿಸಿ ಪ್ರತಿಷ್ಠಿತ ವಾಣಿಜ್ಯ ಸಂಸ್ಥೆಗಳು ಅರ್ಜಿಯನ್ನು ಸಲ್ಲಿಸಿದ್ದು ಆದರೆ ಹೈಕೋರ್ಟ್ ತುರ್ತು ವಿಚಾರಣೆಗೆ ನಿಗದಿಪಡಿಸಲು ನಿರಾಕರಿಸಿ ‘ನೀವು ಕರ್ನಾಟಕದಲ್ಲಿದ್ದ ಮೇಲೆ ಸೂಚನಾ ಫಲಕಗಳನ್ನು ಕನ್ನಡದಲ್ಲಿ ಪ್ರದರ್ಶಿಸಲೇಬೇಕು’ ಎಂದು ಅರ್ಜಿದಾರ ಸಂಸ್ಥೆಗಳ ಪರ ವಕೀಲರಿಗೆ ಹೇಳಿದೆ.

ಈ ಕುರಿತು ರಿಟೇಲರ್ಸ್ ಅಸೋಸಿಯೇಷನ್ ಆಫ್ ಇಂಡಿಯಾ, ಆದಿತ್ಯ ಬಿರ್ಲಾ ಫ್ಯಾಷನ್ ಆ್ಯಂಡ್ ರೀಟೇಲ್ ಲಿಮಿಟೆಡ್, ಟೈಟಾನ್ ಕಂಪನಿ ಲಿಮಿಟೆಡ್, ಅಡಿಡಾಸ್ ಇಂಡಿಯಾ ಮಾರ್ಕೆಟಿಂಗ್ ಪ್ರೈವೇಟ್ ಲಿಮಿಟೆಡ್ ಸೇರಿದಂತೆ 24 ಪ್ರತಿಷ್ಠಿತ ಖಾಸಗಿ ಸಂಸ್ಥೆಗಳು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು ಈ ಸಂಸ್ಥೆಗಳ ಪರವಕೀಲರು ನ್ಯಾಯಮೂರ್ತಿ ಹೇಮಂತ ಚಂದನಗೌಡರ್ ಅವರ ಪೀಠದ ಮುಂದೆ ಹಾಜರಾಗಿ, ಅರ್ಜಿಯನ್ನು ತುರ್ತು ವಿಚಾರಣೆಗೆ ನಿಗದಿಪಡಿಸಬೇಕು ಎಂದು ಮನವಿ ಮಾಡಿದರು.

ಆ ಮನವಿ ತಳ್ಳಿಹಾಕಿದ ನ್ಯಾಯಮೂರ್ತಿಗಳು, ‘ನೀವು (ವಾಣಿಜ್ಯ ಸಂಸ್ಥೆಗಳು) ಕರ್ನಾಟಕದಲ್ಲಿ ವಹಿವಾಟು ನಡೆಸುತ್ತಿದ್ದೀರಿ ಎಂದಾದ ಮೇಲೆ ನಿಮ್ಮ ಸೂಚನಾ ಫಲಕಗಳನ್ನು ಕನ್ನಡದಲ್ಲೇ ಪ್ರದರ್ಶಿಸಬೇಕು. ಅದಕ್ಕೆ ಯಾವುದೇ ವಿನಾಯಿತಿ ನೀಡಲಾಗದು’ ಎಂದು ಮೌಖಿಕವಾಗಿ ಹೇಳಿದ್ದಲ್ಲದೆ ಜೊತೆಗೆ ಕನ್ನಡ ಭಾಷಾ ರಕ್ಷಣೆಗೆ ಸಂಬಂಧಿಸಿದಂತೆ ಶ್ರಮಿಸುತ್ತಿರುವ ಕನ್ನಡ ರಕ್ಷಣಾ ವೇದಿಕೆಗಳ ಹೋರಾಟವನ್ನು ಪ್ರಸ್ತಾಪಿಸಿದರು. ನಂತರ ಅರ್ಜಿದಾರರ ವಿರುದ್ಧದ ಯಾವುದೇ ಬಲವಂತದ ಕ್ರಮ ಕೈಗೊಳ್ಳಬಾರದು ಎಂದು ಸರ್ಕಾರ ಮತ್ತು ಬಿಬಿಎಂಪಿಗೆ ನಿರ್ದೇಶಿಸಿ ಈ ಹಿಂದೆ ಹೊರಡಿಸಿದ್ದ ಮಧ್ಯಂತರ ಆದೇಶವನ್ನು ವಿಸ್ತರಿಸಿ ನ್ಯಾಯಮೂರ್ತಿ ಹೇಮಂತ ಚಂದನಗೌಡರ್ ಅವರು ವಿಚಾರಣೆಯನ್ನು ಮುಂದೂಡಿದರು

spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page