
ಹೈದರಾಬಾದ್: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳವಾರ ಬಿಹಾರದ ಔರಂಗಾಬಾದ್ ನಲ್ಲಿ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿ ಯುವ ಜನರು ಸಾಮಾಜಿಕ ಮಾಧ್ಯಮಗಳಲ್ಲಿ ರೀಲ್ಸ್ ಮಾಡುವುದರಲ್ಲಿ ನಿರತರಾಗಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಬಯಸುತ್ತಾರೆ. ಇದರಿಂದ ಯುವಜನರು ಶಿಕ್ಷಣ ಮತ್ತು ಉದ್ಯೋಗದಂತಹ ಪ್ರಮುಖ ವಿಷಯಗಳ ಕುರಿತು ಪ್ರಶ್ನೆಗಳನ್ನು ಎತ್ತುವುದಿಲ್ಲ ಎಂದು ಪ್ರಧಾನಿಯವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಇದು 21ನೇ ಶತಮಾನದ ವ್ಯಸನವಾಗಿದೆ. ಯಾಕೆಂದರೆ ಇದರಿಂದ ನೀವು ಶಿಕ್ಷಣ, ಆರೋಗ್ಯ ಮತ್ತು ಉದ್ಯೋಗ ಕ್ಷೇತ್ರಗಳ ಸಮಸ್ಯೆಗಳಿಗೆ ಸರಕಾರವನ್ನು ಹೊಣೆಗಾರರನ್ನಾಗಿ ಮಾಡುವುದಿಲ್ಲ ಎಂದು ಅವರ ಚಿಂತನೆ. ಬಿಹಾರದಲ್ಲಿ ಇಂಡಿಯಾ ಮೈತ್ರಿಕೂಟ ಜಯ ಗಳಿಸಿ ಸರಕಾರ ರಚನೆಯಾದರೆ ಹಿಂದುಳಿದವರ, ದಲಿತರ ಏಳಿಗೆಗಾಗಿ ಕೆಲಸ ಮಾಡಲಿದೆ ಎಂದು ಹೇಳಿದರು.






















































