
ಕಠ್ಮಂಡು: 40 ಮಂದಿ ಭಾರತೀಯ ಪ್ರಯಾಣಿಕರಿದ್ದ ಬಸ್ಸೊಂದು ನದಿಗೆ ಬಿದ್ದ ಘಟನೆ ನೇಪಾಳದಲ್ಲಿ ವರದಿಯಾಗಿದೆ,ನೇಪಾಳದ ತನಾಹುನ್ ಜಿಲ್ಲೆಯ ಮರ್ಸ್ಯಾಂಗ್ಡಿ ಸಮೀಪ ನದಿಗೆ ಬಸ್ ಉರುಳಿದೆ. ಉತ್ತರಪ್ರದೇಶದ ಎಫ್‌ಟಿ 7623 ನಂಬರ್ ಪ್ಲೇಟ್ ಹೊಂದಿದ್ದ ಬಸ್ ನದಿಗೆ ಬಿದ್ದಿದೆ.
ಅಪಘಾತ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಬಸ್ಸು ರಸ್ತೆಯಿಂದ ಸುಮಾರು 300 ಮೀಟರ್ ಉರುಳಿ ಬಿದ್ದಿದೆ ಎಂದು ಮಾಹಿತಿ ನೀಡಿದ್ದಾರೆ.













