
ಪಂಚ ಗ್ಯಾರಂಟಿಯ ಶಕ್ತಿ ಯೋಜನೆಯ ಅಡಿಯಲ್ಲಿ ರಾಜ್ಯದಲ್ಲಿ ಸರಕಾರಿ ಬಸ್ಸಿನಲ್ಲಿ ಪ್ರಯಾಣ ಮಾಡಿದ ಮಹಿಳೆಯರ ಸಂಖ್ಯೆ 500 ಕೋಟಿ ದಾಟಿದ್ದು ಒಂದು ದಾಖಲೆಯೇ ಸರಿ ಈ ದಾಖಲೆಯನ್ನು ಸಂಭ್ರಮಿಸು ಮತ್ತು ರಾಜ್ಯ ಸರಕಾರಕ್ಕೆ ಕೃತಜ್ಞತೆ ಸಲ್ಲಿಸುವ ಸಲುವಾಗಿ ಸರಕಾರಿ ಬಸ್ಸ್ ಗಳನ್ನು ಶೃಂಗಾರ ಮಾಡಿ ಅದರ ಚಾಲಕರು ಮತ್ತು ನಿರ್ವಾಹಕರನ್ನು ಗೌರವಿಸಿ ಅಭಿನಂದನೆ ಸಲ್ಲಿಸುವ ಒಂದು ವಿಶೇಷ ಕಾರ್ಯಕ್ರಮವನ್ನು ಸೋಮವಾರ ಬೆಳಿಗ್ಗೆ 9:00 ಗಂಟೆಗೆ ಬಂಡೀಮಠ ಬಸ್ಸ್ ನಿಲ್ದಾಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಪಂಚ ಗ್ಯಾರಂಟಿ ಯೋಜನೆ ಅನುಷ್ಠಾ ಸಮಿತಿ ಕಾರ್ಕಳ ಇದರ ಅಧ್ಯಕ್ಷರಾದ ಅಜಿತ್ ಹೆಗ್ಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.