
ಬೆಂಗಳೂರು: ದಿನನಿತ್ಯ ಬಳಸುವ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿರುವ ಜನಕ್ಕೆ ಇದೀಗ ಮತ್ತೊಂದು ಶಾಕ್ ನೀಡಿದ್ದು ಅದೇನೆಂದರೆ ಖಾಸಗಿ ಶಾಲಾ ಶುಲ್ಕವು ಏರಿಕೆಯಾಗಿದ್ದು, ಫೀಸ್ ಕಟ್ಟಲು ಪೋಷಕರು ಒದ್ದಾಡುತ್ತಿರುವ ಸಂದರ್ಭದಲ್ಲಿ ಇದೀಗ ಪಠ್ಯ ಪುಸ್ತಕದ ದರ ಶೇ 10 ರಷ್ಟು ಏರಿಕೆಯಾಗಿದೆ ಎಂದು ತಿಳಿದುಬಂದಿದೆ.
ನೂರಾರು ಕನಸುಗಳನ್ನು ಹೊತ್ತು ಮಕ್ಕಳಿಗೆ ಒಳ್ಳೆ ಶಿಕ್ಷಣ ಕೊಡಿಸಬೇಕು ಎಂದು ಪೋಷಕರು ಖಾಸಗಿ ಶಾಲೆಗಳಿಗೆ ಮಕ್ಕಳ ದಾಖಲಾತಿ ಮಾಡಿಸುತ್ತಾರೆ. ಕರ್ನಾಟಕ ಪಠ್ಯ ಪುಸ್ತಕ ಸಂಘವು 2025-2026 ನೇ ಸಾಲಿನ ಪಠ್ಯ ಪುಸ್ತಕ ದರವನ್ನು ಶೇ 10 ರಷ್ಟು ಏರಿಕೆ ಮಾಡಿದ್ದು ಇದರ ನೇರ ಪರಿಣಾಮ ಪೋಷಕರಿಗೆ ತಟ್ಟಲಿದೆ.
ಈ ಕುರಿತು ಮಾತನಾಡಿದ ಖಾಸಗಿ ಶಾಲೆಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಶಶಿಕುಮಾರ್ ಎಲ್ಲದರ ಬೆಲೆ ಏರಿಕೆಯಾಗಿರುವುದರಿಂದ ಜನರಿಗೆ ತೊಂದರೆ ಆಗುತ್ತಿದೆ ಎಂದು ಸಾಕಷ್ಟು ಬಾರಿ ನಾವು ಸರ್ಕಾರಕ್ಕೂ ಮನವಿ ಮಾಡಿದ್ದೇವೆ. ಆದರೆ ಯಾವುದೇ ಪ್ರಯೋಜನವಾಗಿಲ್ಲ. ಹೀಗಾಗಿ ಪಠ್ಯ ಪುಸ್ತಕ ದರವನ್ನು ಅನಿವಾರ್ಯವಾಗಿ ಏರಿಕೆ ಮಾಡಬೇಕಿದ್ದು ಈ ಏರಿಕೆಯ ಹೊರೆಯನ್ನು ನಾವು ಪೋಷಕರ ಮೇಲೆ ಹಾಕಬೇಕಿದೆ ಎಂದು ತಿಳಿಸಿದ್ದಾರೆ.




