
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಮೈಕ್ರೋಫೈನಾನ್ಸ್ ಸುಗ್ರೀವಾಜ್ಞೆ ಜಾರಿ ಕುರಿತು ವಿಡಿಯೋ ಸಂವಾದ ನಡೆಸಿ ಕೆಲವು ಸೂಚನೆಗಳನ್ನು ನೀಡಿದ್ದಾರೆ.
1) ಪರವಾನಿಗೆ ಪಡೆಯದೆ ಅಕ್ರಮವಾಗಿ ಕಾರ್ಯನಿರ್ವಹಿಸುವ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಮೇಲೆ ನಿರಂತರ ನಿಗ ಇರಿಸಬೇಕು.
2) ಪರವಾನಿಗೆ ಪಡೆದು ಕಾರ್ಯನಿರ್ವಹಿಸುವ ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಆರ್‌ಬಿಐ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸುವಂತೆ ನೋಡಿಕೊಳ್ಳಬೇಕು.
3) ಬಲವಂತದ ವಸೂಲಾತಿ ಮಾಡುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು.
4) ಬಲವಂತದ ಸಾಲ ವಸುಲಾತಿ ಮಾಡುವ ಪ್ರಕರಣಗಳಲ್ಲಿ ಸ್ವಯಂ ಪ್ರೇರಿತವಾಗಿ ಮೊಕದ್ದಮೆ ದಾಖಲಿಸಬೇಕು.
5) ಯಾವುದೇ ಜಿಲ್ಲೆಗಳಲ್ಲಿ ಸಾಲಗಾರರ ಕಿರುಕುಳ ಮುಂದುವರೆದಿರುವುದು ಬೆಳಕಿಗೆ ಬಂದರೆ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು ಹಾಗೂ ಪೊಲೀಸ್ ವರಿಷ್ಠಾಧಿಕಾರಿಯನ್ನು ನೇರ ಹೊಣೆ ಮಾಡಲಾಗುವುದು.
6) ಈ ಕಾಯ್ದೆಯ ಎಲ್ಲಾ ಅಂಶಗಳನ್ನು ಜಿಲ್ಲೆಗಳಲ್ಲಿ ಕಟ್ಟು ನಿಟ್ಟಿನಿಂದ ಜಾರಿಗೆ ತರಬೇಕು.



















