ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಅರುಣ್ ಕುಮಾರ್ ಅಮಾನತು
ನೂತನ ಸಹಾಯಕ ಯೋಜನಾ ನಿರ್ದೇಶಕರಾಗಿ ದಿವಾಕರ್ ಪಿ.

ನಿರ್ಮಿತಿ ಕೇಂದ್ರ ಯೋಜನಾ ನಿರ್ದೇಶಕರಾದ ಅರುಣ್ ಕುಮಾರ್ ಅವರು ಕಾರ್ಕಳ ತಾಲೂಕು ಎರ್ಲಪಾಡಿ ಗ್ರಾಮದ ಬೈಲೂರು ಉಮಿಕಲ್ ಬೆಟ್ಟದಲ್ಲಿ ನಿರ್ಮಿಸಿರುವ ಪರಶುರಾಮ ಥೀಂ ಪಾರ್ಕ್ ಕಾಮಗಾರಿ ಪೂರ್ಣಗೊಳಿಸದೇ, ಸಂಬಂದಪಟ್ಟ ಇಲಾಖೆಗೆ ಹಸ್ತಾಂತರ ಮಾಡದೇ ಉದ್ಘಾಟನಾ ಕಾರ್ಯಕ್ರಮವನ್ನು ಮಾಡಿರುವುದರಿಂದ, ಈ ಕಾಮಗಾರಿಯ ಗುಣಮಟ್ಟದ ಬಗ್ಗೆ ಆರೋಪಗಳಿರುವುದರಿಂದ ಮತ್ತು ಈ ವಿಚಾರದ ಬಗ್ಗೆ ಸಿ.ಒ.ಡಿ ತನಿಖೆ ಹಾಗೂ ನಾಯಮೂರ್ತಿ ಹೆಚ್ ಎನ್ ನಾಗಮೋಹನ್ ದಾಸ್ ವಿಚಾರಣಾ ಆಯೋಗದಲ್ಲಿ ತನಿಖಾ ಹಂತದಲ್ಲಿ ಇದ್ದು ಸದ್ರಿ ತನಿಖೆಗೆ ಅಡಚಣೆ ಆಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕ ಮತ್ತು ಆಡಳಿತಾತ್ಮಕ ಹಿತದೃಷ್ಟಿಯಿಂದ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕರಾದ ಅರುಣ್ ಕುಮಾರ್ ಇವರನ್ನು ಅಮಾನತಿನಲ್ಲಿಟ್ಟು ಆದೇಶಿಸಿದೆ.
ಇವರ ಸ್ಥಾನಕ್ಕೆ ದಿವಾಕರ ಪಿ. ಸಹಾಯಕ ಯೋಜನಾ ನಿರ್ದೇಶಕರು, ನಿರ್ಮಿತಿ ಕೇಂದ್ರ ಉಡುಪಿ ಇವರನ್ನು ಯೋಜನಾ ನಿರ್ದೇಶಕರು, ನಿರ್ಮಿತಿ ಕೇಂದ್ರ ಉಡುಪಿ ಹುದ್ದೆಗೆ ಹೆಚ್ಚುವರಿ ಪ್ರಭಾರ ನೀಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.








