
ಬೆಂಗಳೂರು: ಕಾರ್ಕಳ ತಾಲೂಕಿನ ಬೈಲೂರು ಸಮೀಪದ ಉಮಿಕ್ಕಲ್ ಬೆಟ್ಟದಲ್ಲಿರುವ ಪರಶುರಾಮನ ಪ್ರತಿಮೆಯ ಗುಣಮಟ್ಟ ಕಳಪೆಯಾಗಿದೆ ಹಾಗೂ ಕಾರ್ಯಾದೇಶವಿಲ್ಲದೇ ಕಾಮಗಾರಿ ಆರಂಭಿಸಿ ಕಾಮಗಾರಿ ಮುಕ್ತಾಯಕ್ಕೂ ಮುನ್ನವೇ ಸರ್ಕಾರದ ಹಣವನ್ನು ಗುತ್ತಿಗೆದಾರನ ಖಾತೆಗೆ ವರ್ಗಾವಣೆ ಮಾಡಲಾಗಿದ್ದು ,ಈ ಪ್ರಕರಣದ ತನಿಖೆಗೆ ಆದೇಶಿಸಬೇಕೆಂದು ಎಂದು ಕಾರ್ಕಳ ತಾಲೂಕಿನ ನಲ್ಲೂರು ಗ್ರಾಮದ ಕೃಷ್ಣ ಶೆಟ್ಟಿ ಎಂಬುವವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಈ ಯೋಜನೆಯಲ್ಲಿ ಭಾರೀ ಅಕ್ರಮ ನಡೆದಿದೆ ಆದ್ದರಿಂದ ಹೈಕೋರ್ಟ್ ಸಮಗ್ರ ತನಿಖೆ ನಡೆಸಬೇಕೆಂದು ಅರ್ಜಿಯಲ್ಲಿ ಒತ್ತಾಯಿಸಿದ್ದರು. ಈ ಅರ್ಜಿಯ ವಿಚಾರಣೆ ಕೈಗೆತ್ತಿಕೊಂಡ ಮುಖ್ಯ ನ್ಯಾಯಮೂರ್ತಿ ಎನ್.ವಿ ಅಂಜಾರಿಯಾ ನೇತೃತ್ವದ ವಿಭಾಗೀಯ ಪೀಠ,ಈ ಪ್ರಕರಣದ ಕುರಿತು ಈಗಾಗಲೇ ಸಿಐಡಿ ತನಿಖೆ ನಡೆಸುತ್ತಿದೆ, ಆದ್ದರಿಂದ ತನಿಖಾ ಹಂತದಲ್ಲಿ ಕೋರ್ಟ್ ಮಧ್ಯಪ್ರವೇಶ ಮಾಡಲು ಸಾಧ್ಯವಿಲ್ಲ ಎಂಬ ಅಭಿಪ್ರಾಯ ವ್ಯಕ್ತಪಡಿಸಿ ಅರ್ಜಿಯನ್ನು ವಜಾಗೊಳಿಸಿದೆ.













