26.1 C
Udupi
Wednesday, April 22, 2026
spot_img
spot_img
HomeBlogಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಒಳ ಮೀಸಲಾತಿಗೆ ಒಪ್ಪಿಗೆ ಸೂಚಿಸಿದ ಸುಪ್ರೀಂ ಕೋರ್ಟ್‌

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಒಳ ಮೀಸಲಾತಿಗೆ ಒಪ್ಪಿಗೆ ಸೂಚಿಸಿದ ಸುಪ್ರೀಂ ಕೋರ್ಟ್‌

ನವದೆಹಲಿ: ಒಳ ಮೀಸಲಾತಿ ಕಾನೂನು ಬದ್ಧ ಎಂದು ಹೇಳುವ ಮೂಲಕ ಸುಪ್ರೀಂ ಕೋರ್ಟ್ SC, ST ಗೆ ನೀಡಲಾಗಿರುವ ಮೀಸಲಾತಿ ಒಳಗಡೆಯೇ ಮೀಸಲಾತಿ ನೀಡಲು ಒಪ್ಪಿಗೆ ನೀಡಿದೆ. ಇನ್ನು ಸರ್ಕಾರಿ ಉದ್ಯೋಗಗಳಲ್ಲಿ ಯಾವ ಜಾತಿ, ಪಂಗಡಗಳಿಗೆ ಒಳ ಮೀಸಲಾತಿ ನೀಡಬೇಕೆಂಬ ಅಧಿಕಾರವನ್ನು ಕೋರ್ಟ್‌ ರಾಜ್ಯಗಳ ವಿವೇಚನೆಗೆ ನೀಡಿದೆ.

ಒಳ ಮೀಸಲಾತಿ ಸಂಬಂಧ ಪಂಜಾಬ್ ಪರಿಶಿಷ್ಟ ಜಾತಿ ಮತ್ತು ಹಿಂದುಳಿದ ವರ್ಗಗಳ ಕಾಯ್ದೆಯ ಸಿಂಧುತ್ವ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂತ್ರಿ ಚಂದ್ರಚೂಡ್‌ ನೇತೃತ್ವದ ನ್ಯಾ. ಬಿಆರ್ ಗವಾಯಿ, ವಿಕ್ರಮ್ ನಾಥ್, ಬೇಲಾ ಎಂ ತ್ರಿವೇದಿ, ಪಂಕಜ್ ಮಿಥಾಲ್, ಮನೋಜ್ ಮಿಶ್ರಾ ಮತ್ತು ಸತೀಶ್ ಚಂದ್ರ ಶರ್ಮಾ ಅವರನ್ನೊಳಗೊಂಡ ಸಂವಿಧಾನ ಪೀಠವು ಈ ಆದೇಶ ಹೊರಡಿಸಿದೆ.

ಕೋರ್ಟ್ ಆದೇಶದಲ್ಲಿರುವ ಮುಖ್ಯಾಂಶ: ಎಸ್‌ಸಿ/ಎಸ್‌ಟಿ ಜನರು ಎದುರಿಸುತ್ತಿರುವ ವ್ಯವಸ್ಥಿತ ತಾರತಮ್ಯದಿಂದಾಗಿ ಸಮಾಜದಲ್ಲಿ ಮೇಲಕ್ಕೆ ಬರಲು ಸಾಧ್ಯವಾಗುತ್ತಿಲ್ಲ. ಸಂವಿಧಾನದ 14ನೇ ವಿಧಿ ಜಾತಿಯ ಉಪ-ವರ್ಗೀಕರಣವನ್ನು ಅನುಮತಿಸುತ್ತದೆ. ಮೀಸಲಾತಿ ಪಟ್ಟಿಗೆ ಸಮುದಾಯಗಳ ಸೇರ್ಪಡೆ ಅಥವಾ ತೆಗೆಯಲು ತುಷ್ಟೀಕರಣ ರಾಜಕೀಯ ಮಾಡಬಾರದು.ಪರಿಶಿಷ್ಟ ಜಾತಿಗಳು ಏಕರೂಪದ ಗುಂಪಲ್ಲ. ಎಸ್‌ಸಿಗಳಲ್ಲಿ ಹೆಚ್ಚು ತಾರತಮ್ಯವನ್ನು ಅನುಭವಿಸಿದವರಿಗೆ 15% ಮೀಸಲಾತಿಯಲ್ಲಿ ಹೆಚ್ಚಿನ ಅವಕಾಶ ನೀಡಲು ಸರ್ಕಾರಗಳು ಅವರನ್ನು ಉಪವರ್ಗೀಕರಿಸಬಹುದು.ಎಸ್‌ಸಿಗಳಲ್ಲಿ ಜಾತಿಗಳ ಉಪ-ವರ್ಗೀಕರಣವು ಅವರ ತಾರತಮ್ಯದ ಮಟ್ಟವನ್ನು ಆಧರಿಸಿರಬೇಕು. ಸರ್ಕಾರಿ ಉದ್ಯೋಗಗಳು ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಅವರ ಪ್ರಾತಿನಿಧ್ಯದ ಕುರಿತು ಪ್ರಾಯೋಗಿಕ ಡೇಟಾವನ್ನು ಸಂಗ್ರಹಿಸುವ ಮೂಲಕ ರಾಜ್ಯಗಳು ಮಾಡಬಹುದು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page