31.5 C
Udupi
Sunday, February 8, 2026
spot_img
spot_img
HomeBlogಪಶ್ಚಿಮಘಟ್ಟದ ಮಂಗನ ಕಾಯಿಲೆಗೆ ಲಸಿಕೆ: ಐಸಿಎಂಆರ್‌ ಮಾನವ ಕ್ಲಿನಿಕಲ್‌ ಪ್ರಯೋಗ ಆರಂಭ

ಪಶ್ಚಿಮಘಟ್ಟದ ಮಂಗನ ಕಾಯಿಲೆಗೆ ಲಸಿಕೆ: ಐಸಿಎಂಆರ್‌ ಮಾನವ ಕ್ಲಿನಿಕಲ್‌ ಪ್ರಯೋಗ ಆರಂಭ

ನವದೆಹಲಿ : ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯ (ಐಸಿಎಂಆರ್‌) ವಿಜ್ಞಾನಿಗಳು ಕರ್ನಾಟಕದ ಪಶ್ಚಿಮಘಟ್ಟ ಪ್ರದೇಶದ ಜನರಲ್ಲಿ ತೀವ್ರ ಆತಂಕ ಮೂಡಿಸಿರುವ ಮಂಗನ ಕಾಯಿಲೆಗೆ ಲಸಿಕೆ ಅಭಿವೃದ್ಧಿಪಡಿಸುವಲ್ಲಿ ಯಶಸ್ವಿಯಾಗಿದ್ದು ಪ್ರಾಣಿಗಳ ಮೇಲಿನ ಪ್ರಯೋಗದ ಬಳಿಕ ಇದೀಗ ಮಾನವರ ಮೇಲೆ ಲಸಿಕೆಯ ಕ್ಲಿನಿಕಲ್‌ ಪ್ರಯೋಗಕ್ಕೆ ಹೆಜ್ಜೆ ಇಟ್ಟಿದೆ.

ಶನಿವಾರ ಕೇಂದ್ರ ಆರೋಗ್ಯ ಸಚಿವಾಲಯವು ಈ ಕುರಿತು ಮಾಹಿತಿ ನೀಡಿ ಕರ್ನಾಟಕ ಸರ್ಕಾರದ ಕೋರಿಕೆಯ ಮೇರೆಗೆ, ಐಸಿಎಂಆರ್ ಲಸಿಕೆ ಅಭಿವೃದ್ಧಿಪಡಿಸಿದೆ. 2 ಡೋಸ್‌ಗಳ ಈ ಲಸಿಕೆಯನ್ನು ದ ಇಂಡಿಯನ್‌ ಇಮ್ಯುನುಲಾಜಿಕಲ್ಸ್‌ (ಐಐಎಲ್‌) ಮತ್ತು ಐಸಿಎಂಆರ್‌ನ ನ್ಯಾಷನಲ್‌ ಇನ್ಸ್‌ಟಿಟ್ಯೂಟ್‌ ಆಫ್‌ ವೈರಾಲಜಿ ಜಂಟಿಯಾಗಿ ಅಭಿವೃದ್ಧಿಪಡಿಸಿವೆ. 28 ದಿನಗಳ ಅಂತರದಲ್ಲಿ 2 ಸಲ ನೀಡುವ ರೀತಿಯ ಲಸಿಕೆಯನ್ನು ಇದೀಗ ಅಭಿವೃದ್ಧಿಪಡಿಸಲಾಗಿದೆ ಎಂದು ತಿಳಿಸಿದೆ.

‘ಈಗಾಗಲೇ ಲಸಿಕೆಯನ್ನು ಪ್ರಾಣಿಗಳ ಮೇಲೆ ಪ್ರಯೋಗಿಸಲಾಗಿದ್ದು ಲಸಿಕೆಯ ವಿಷಕಾರಿ ಅಂಶಗಳ ಅಧ್ಯಯನಗಳು ಪೂರ್ಣಗೊಂಡಿವೆ. ಇದೀಗ ಮಾನವನ ಮೇಲಿನ ಮೊದಲನೇ ಹಂತದ ಪ್ರಾಯೋಗಿಕ ಪರೀಕ್ಷೆ ಆರಂಭಿಸಲಾಗಿದ್ದು ಈ ಹಂತ ಯಶಸ್ವಿಯಾದರೆ ಮುಂದಿನ ಪ್ರಯೋಗಗಳನ್ನು ನಡೆಸಲಾಗುತ್ತದೆ. ಲಸಿಕೆ ಸುರಕ್ಷಿತ ಎಂದು ಖಚಿತವಾದರೆ ಕೇಂದ್ರ ಔಷಧ ಗುಣಮಟ್ಟ ನಿಯಂತ್ರಣ ಮಂಡಳಿಯಿಂದ ಅನುಮೋದನೆ ಪಡೆಯಲಾಗುವುದು’ ಎಂದು ಮಾಹಿತಿ ನೀಡಿದೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page