
ನವದೆಹಲಿ: ಭಾರತ ʻಆಪರೇಷನ್ ಸಿಂಧೂರʼ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದು ಈ ನಡುವೆ ಉಭಯ ರಾಷ್ಟ್ರಗಳ ನಡುವೆ ಉದ್ವಿಗ್ನತೆ ಹೆಚ್ಚಾಗಿದೆ. ಪಾಕ್ ಕ್ಷಿಪಣಿ ದಾಳಿ ಬೆನ್ನಲ್ಲೇ ಭಾರತ ದೇಶಾದ್ಯಂತ 24 ವಿಮಾನ ನಿಲ್ದಾಣಗಳ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಮೂಲಗಳು ತಿಳಿಸಿದೆ.
ದೇಶಾದ್ಯಂತ ರಾಷ್ಟ್ರೀಯ, ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದ್ದು ಹಲವು ಭಾರತೀಯ ವಿಮಾನಯಾನ ಸಂಸ್ಥೆಗಳು ಪ್ರಯಾಣ ಸಲಹೆಗಳನ್ನು ನೀಡಿದೆ. ಅದಕ್ಕೆ ಅನುಗುಣವಾಗಿ ಪ್ರಯಾಣಿಕರು ತಮ್ಮ ಪ್ರಯಾಣದ ಯೋಜನೆಯನ್ನು ಪ್ಲ್ಯಾನ್ ಮಾಡಿಕೊಳ್ಳುವಂತೆ ಸೂಚನೆ ನೀಡಿದೆ.