
ನವದೆಹಲಿ: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಲ್ಲಿ ನೀಡಲಾಗುವ 18ನೇ ಕಂತಿನ 2,000 ರೂ. ಹಣ ಅಕ್ಟೋಬರ್ 5ಕ್ಕೆ ಜಮೆಯಾಗಲಿದೆ.
2019ರಲ್ಲಿ ಆರಂಭವಾದ ಈ ಯೋಜನೆಯಲ್ಲಿ ಎಲ್ಲಾ ನೊಂದಾಯಿತ ರೈತರಿಗೆ ವರ್ಷಕ್ಕೆ ಮೂರು ಕಂತುಗಳಲ್ಲಿ 6,000 ರೂ ಹಣವನ್ನು ಸರ್ಕಾರ ಸಹಾಯಧನವಾಗಿ ನೀಡುತ್ತದೆ. ಪ್ರತೀ ಕಂತಿನಲ್ಲೂ ರೈತರಿಗೆ 2,000 ರೂ ಸಿಗುತ್ತದೆ.
ಸಣ್ಣ ರೈತರಿಗೆ ವ್ಯವಸಾಯಕ್ಕೆ ಸಹಾಯಾಗಲೆಂದು ಸರ್ಕಾರ ಈ ಸ್ಕೀಮ್ ಆರಂಭಿಸಿದ್ದು ಎರಡು ಹೆಕ್ಟೇರ್ ಅಥವಾ ಐದು ಎಕರೆಯೊಳಗಿನ ಜಮೀನು ಹೊಂದಿರುವ ರೈತರು ಈ ಸ್ಕೀಮ್ಗೆ ಅರ್ಹರಾಗಿರುತ್ತಾರೆ. ಸರ್ಕಾರಿ ಸೇವೆಯಲ್ಲಿರುವವರು, ವೈದ್ಯ, ವಕೀಲ ಇತ್ಯಾದಿ ವೃತ್ತಿಪರ ಕೆಲಸದವರು, ಶಾಸಕರು, ಸಂಸದರು ಇತ್ಯಾದಿ ಜನಪ್ರತಿನಿಧಿಗಳು, ತೆರಿಗೆ ಪಾವತಿಸುತ್ತಿರುವವರು ಹಾಗೂ ಅವರು ಇರುವ ಕುಟುಂಬದವರು ಪಿಎಂ ಕಿಸಾನ್ ಯೋಜನೆ ಪಡೆಯಲು ಅರ್ಹತೆ ಹೊಂದಿರುವುದಿಲ್ಲ. ಇಲ್ಲಿಯವರೆಗೆ ಸುಮಾರು 10 ಕೋಟಿ ರೈತರು ಸ್ಕೀಮ್ಗೆ ನೊಂದಾಯಿಸಿಕೊಂಡಿದ್ದಾರೆ.








































