
ಮಂಗಳೂರು: ಪುತ್ತೂರು ತಾಲೂಕಿನ ಕುಂಬ್ರ ಸಮೀಪದ ಪರ್ಪುಂಜ ಕೊಯಿಲತ್ತಡ್ಕ ಅಬ್ರೋಡ್ ಹಾಲ್ ಬಳಿ ಕಾರು ಮತ್ತು ಆಟೋ ನಡುವೆ ಭೀಕರ ಅಪಘಾತ ಸಂಭವಿಸಿ, ನಾಲ್ಕು ವರ್ಷದ ಮಗು ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ.
ಪುತ್ತೂರುನಿಂದ ಕುಟುಂಬ ಸಮೇತ ತಿಂಗಳಾಡಿ ಕಡೆಗೆ ಆಟೋ ಚಾಲಕ ತೆರಳುತ್ತಿದ್ದು ಇತ್ತ ಕಾರು ಸುಳ್ಯ ದಿಕ್ಕಿನಿಂದ ಪುತ್ತೂರಿನತ್ತ ಬರುತ್ತಿತ್ತು. ಬಸ್ ಅನ್ನು ಓವರ್‌ಟೇಕ್ ಮಾಡುವ ವೇಳೆ ನಿಯಂತ್ರಣ ತಪ್ಪಿ ಕಾರು ಆಟೋಗೆ ಮುಖಾಮುಖಿ ಡಿಕ್ಕಿಯಾಗಿದೆ.
ಅಪಘಾತದಲ್ಲಿ ಆಟೋ ಚಾಲಕ ಹನೀಫ್ ಬನ್ನೂರು ಅವರ ನಾಲ್ಕೂವರೆ ವರ್ಷದ ಮಗಳು ಶಜ್ವಾ ಫಾತಿಮಾ ಸಾವನ್ನಪ್ಪಿದ್ದು ಹನೀಫ್ ಅವರ ಪತ್ನಿ, ಅತ್ತೆ ಮತ್ತು ಇಬ್ಬರು ಮಕ್ಕಳಿಗೆ ಗಂಭೀರವಾಗಿ ಗಾಯಗಳಾಗಿವೆ. ಈ ಪೈಕಿ ಇಬ್ಬರನ್ನು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ಸ್ಥಳಾಂತರಿಸಲಾಗಿದ್ದು ಪುತ್ತೂರು ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.






















































