26.3 C
Udupi
Wednesday, May 6, 2026
spot_img
spot_img
HomeBlogಪೊಲೀಸರು ಇನ್ನುಮುಂದೆ ಆರೋಪಿಗಳಿಗೆ ಇ-ಮೇಲ್, ವಾಟ್ಸಾಪ್ ಮೂಲಕ ನೋಟಿಸ್ ಕಳುಹಿಸುವಂತಿಲ್ಲ : ಸುಪ್ರೀಂ ಕೋರ್ಟ್ ಆದೇಶ

ಪೊಲೀಸರು ಇನ್ನುಮುಂದೆ ಆರೋಪಿಗಳಿಗೆ ಇ-ಮೇಲ್, ವಾಟ್ಸಾಪ್ ಮೂಲಕ ನೋಟಿಸ್ ಕಳುಹಿಸುವಂತಿಲ್ಲ : ಸುಪ್ರೀಂ ಕೋರ್ಟ್ ಆದೇಶ

ಸುಪ್ರೀಂಕೋರ್ಟ್ ಮಹತ್ವದ ಆದೇಶವನ್ನು ಹೊರಡಿಸಿದ್ದು ಅದೇನೆಂದರೆ ಇನ್ನು ಮುಂದೆ ಪೊಲೀಸರು ವಾಟ್ಸಾಪ್, ಇ-ಮೇಲ್ಗಳ ಮೂಲಕ ಆರೋಪಿಗಳಿಗೆ ನೋಟಿಸ್ ಕಳುಹಿಸುವಂತಿಲ್ಲ ಎಂದು ಸೂಚಿಸಿದೆ.

ನ್ಯಾಯಾಲಯಗಳ ಕಲಾಪಗಳಲ್ಲಿ ತಂತ್ರಜ್ಞಾನ ಬಳಕೆಯಲ್ಲಿ ಸಾಕಷ್ಟು ಪ್ರಗತಿ ಕಂಡಿದ್ದರೂ ಸುಪ್ರೀಂಕೋರ್ಟ್, ಪೋಲಿಸರು ಮತ್ತು ಕಾನೂನು ಜಾರಿ ಸಂಸ್ಥೆಗಳು ಸಿಆರ್‌ಪಿಸಿಯ ಕಲಂ 41ಎ ಅಥವಾ ಭಾರತೀಯ ನಾಗರಿಕ ಸುರಕ್ಷಾ ಸಂಹಿತಾದ ಕಲಂ 35ರಡಿ ವಾಟ್ಸಾಪ್ ಅಥವಾ ಇತರ ವಿದ್ಯುನ್ಮಾನ ವಿಧಾನಗಳ ಮೂಲಕ ಬಂಧನ-ಪೂರ್ವ ನೋಟಿಸ್‌ಗಳನ್ನು ಕಳುಹಿಸುವಂತಿಲ್ಲ ಎಂದು ಹೇಳಿದೆ.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂಎಂ ಸುಂದರೇಶ್ ಮತ್ತು ನ್ಯಾಯಮೂರ್ತಿ ರಾಜೇಶ್ ಬಿಂದಾಲ್ ಅವರ ಪೀಠವು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಈ ಆದೇಶಗಳನ್ನು ಆಯಾ ಪೊಲೀಸ್ ಇಲಾಖೆಗಳಿಗೆ ನೀಡುವಂತೆ ಸೂಚಿಸಿದ್ದು ಸಿಆರ್‌ಪಿಸಿ ಅಥವಾ ಬಿಎನ್‌ಎಸ್‌ಎಸ್ ಅಡಿಯಲ್ಲಿ ನಿಗದಿತ ಸೇವಾ ವಿಧಾನದ ಮೂಲಕ ಮಾತ್ರ ಅಂತಹ ಸೂಚನೆಗಳನ್ನು ನೀಡುವಂತೆ ರಾಜ್ಯ ಸರ್ಕಾರಗಳಿಗೆ ಆದೇಶಗಳನ್ನು ನೀಡುವಂತೆ ನ್ಯಾಯಾಲಯ ಆದೇಶಿಸಿದೆ.

ವಾಟ್ಸಾಪ್ ಅಥವಾ ಇತರ ವಿದ್ಯುನ್ಮಾನ ವಿಧಾನಗಳ ಮೂಲಕ ನೋಟಿಸ್‌ಗಳನ್ನು ಹೊರಡಿಸುವುದನ್ನು ಸಿಆರ್‌ಪಿಸಿ,1973/ಬಿಎನ್‌ಎಸ್‌ಎಸ್, 2023ಯಲ್ಲಿ ಗುರುತಿಸಲಾಗಿರುವ ಮತ್ತು ಸೂಚಿಸಲಾಗಿರುವ ವಿಧಾನಗಳಿಗೆ ಪರ್ಯಾಯವಾಗಿ ಅಥವಾ ಬದಲಿಯಾಗಿ ಪರಿಗಣಿಸುವಂತಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ ಎಂದು ಹೇಳಿತು.

ಹಿರಿಯ ವಕೀಲ ಸಿದ್ಧಾರ್ಥ್ ಲೂತ್ರಾ ಅವರ ಅರ್ಜಿಯ ವಿಚಾರಣೆ ವೇಳೆ CrPC 1973 ರ ಸೆಕ್ಷನ್ 41-A ಅಡಿಯಲ್ಲಿ ನೋಟಿಸ್ ಅನ್ನು ವಾಟ್ಸಾಪ್ ಮೂಲಕ ಕಳುಹಿಸಲಾಗಿದೆ ಆದರೆ ಆರೋಪಿಗಳು ತನಿಖಾಧಿಕಾರಿಯ ಮುಂದೆ ಹಾಜರಾಗದ ಪ್ರಕರಣಗಳನ್ನು ಲುಥ್ರಾ ಹೈಲೈಟ್ ಮಾಡಿದ್ದು ಬಳಿಕ ಸುಪ್ರೀಂ ಕೋರ್ಟ್ ಈ ತೀರ್ಪನ್ನು ಹೊರಡಿಸಿದೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page