
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಪೋಕ್ಸೋ ಪ್ರಕರಣ ಎದುರಿಸುತ್ತಿದ್ದು ಇದೀಗ ನ್ಯಾಯಾಲಯವು ಯಡಿಯೂರಪ್ಪ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿ ತಾತ್ಕಾಲಿಕ ರಿಲೀಫ್ ನೀಡಿದೆ.
ಯಡಿಯೂರಪ್ಪ ಅವರು ತಮ್ಮ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣವನ್ನು ರದ್ದು ಕೋರಿ ಅರ್ಜಿ ಸಲ್ಲಿಸಿದ್ದು ಇದರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ನಾಗ ಪ್ರಸನ್ನ ಅವರ ಪೀಠವು ನಿರೀಕ್ಷಣಾ ಜಾಮೀನು ನೀಡಿ ಕೇಸ್ ರದ್ದತಿಗೆ ನಿರಾಕರಣೆ ಮಾಡಿದೆ.





















