ಕುಸ್ತಿಪಟುಗಳು ಕಾಂಗ್ರೆಸ್ ದಾಳ, ದೇವರೇ ನಿಮಗೆ ಶಿಕ್ಷೆ ನೀಡಿದ್ದಾರೆ ಎಂದ ಬ್ರಿಜ್ ಭೂಷಣ್

ಕುಸ್ತಿಪಟುಗಳಾದ ವಿನೇಶ್ ಪೋಗಟ್ ಮತ್ತು ಬಜರಂಗಪೂನಿಯ ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಗೊಂಡಿದ್ದು ಇದೀಗ ವೀನೆಶ್ ಗೆ ಹರಿಯಾಣ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ಘೋಷಣೆ ಮಾಡಿದೆ.
ಈ ವಿಚಾರವಾಗಿ ಮಾಧ್ಯಮದೊಂದಿಗೆ ಮಾತನಾಡುವ ಸಂದರ್ಭದಲ್ಲಿ ಲೈಂಗಿಕ ಕಿರುಕುಳದ ಆರೋಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್, ಕುಸ್ತಿಪಟುಗಳನ್ನು ಕಾಂಗ್ರೆಸ್ ದಾಳವಾಗಿ ಬಳಸಿಕೊಂಡಿದೆ. ಪ್ರತಿಭಟನೆ ಆರಂಭಗೊಂಡ ದಿನದಿಂದಲೂ ಇದರ ಹಿಂದೆ ಕಾಂಗ್ರೆಸ್ ಪಾತ್ರವಿದೆ ಎಂದು ನಾನು ಹೇಳಿದ್ದೆ,ಅದೀಗ ನಿಜವಾಗಿದೆ. ಬಿಜೆಪಿ ಮತ್ತು ಭಾರತೀಯ ಕುಸ್ತಿ ಫೆಡರೇಷನ್ ಮೇಲೆ ಹಿಡಿತ ಸಾಧಿಸುವ ಸಲುವಾಗಿ ಈ ಸಂಚು ರೂಪಿಸಲಾಗಿದೆ. ಇನ್ನು, ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ವೀನೆಸ್ ಅನರ್ಹ ವಿಚಾರವಾಗಿ, ದೇವರೇ ಶಿಕ್ಷೆ ನೀಡಿದ್ದಾನೆ ಎಂದು ಬ್ರಿಜ್ ಭೂಷಣ್ ಸಿಂಗ್ ಹೇಳಿಕೆ ನೀಡಿದ್ದಾರೆ.













