29.3 C
Udupi
Wednesday, April 22, 2026
spot_img
spot_img
HomeBlogಪ್ರಜ್ವಲ್ ಅತ್ಯಾಚಾರ ಎಸಗಿರುವುದು ದೃಢಪಟ್ಟಿದೆ: ಎಸ್ಐಟಿ

ಪ್ರಜ್ವಲ್ ಅತ್ಯಾಚಾರ ಎಸಗಿರುವುದು ದೃಢಪಟ್ಟಿದೆ: ಎಸ್ಐಟಿ

ಬೆಂಗಳೂರು: ಪ್ರಜ್ವಲ್ ರೇವಣ್ಣನ ವಿರುದ್ಧದ ಲೈಂಗಿಕ ದೌರ್ಜನ್ಯದ ಕುರಿತು ವಿಚಾರಣೆ ನಡೆಸುತ್ತಿರುವ ವಿಶೇಷ ತನಿಖಾ ಸಂಸ್ಥೆ ಮಾಜಿ ಸಚಿವ ಹೆಚ್ಡಿ ರೇವಣ್ಣ ಹಾಗೂ ಅವರ ಪುತ್ರ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ತಮ್ಮ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಗೆ ಲೈಂಗಿಕ ಕಿರುಕುಳ ಮತ್ತು ಅತ್ಯಾಚಾರವೆಸಗಿರುವುದು ದೃಢಪಟ್ಟಿದೆ ಎಂದು ನ್ಯಾಯಲಯಕ್ಕೆ ಸಲ್ಲಿಸಿದ ಚಾರ್ಜ್ಶೀಟ್ನಲ್ಲಿ ಉಲ್ಲೇಖಿಸಿದೆ.

ಹೊಳೆನರಸೀಪುರ ಠಾಣೆಯಲ್ಲಿ ಹೆಚ್ಡಿ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಮತ್ತು ಪ್ರಜ್ವಲ್ ರೇವಣ್ಣ ಅವರ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದ್ದು ಈ ಎರಡೂ ಪ್ರಕರಣದ ತನಿಖೆ ನಡೆಸಿದ ವಿಶೇಷ ತನಿಖಾ ಸಂಸ್ಥೆ ಶುಕ್ರವಾರ 2144 ಪುಟಗಳ ದೋಷಾರೋಪಪಟ್ಟಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಿದೆ.

ಸಂತ್ರಸ್ತೆ 2019 ರಿಂದ 2022ರವರೆಗೆ ಮನೆ ಕೆಲಸಕ್ಕೆ ನಿಯೋಜನೆ ಮಾಡಿದ್ದು ಈ ವೇಳೆ ಹೆಚ್ಡಿ ರೇವಣ್ಣ ಅವರು ಪತ್ನಿ ಭವಾನಿ ರೇವಣ್ಣ ಮನೆಯಲ್ಲಿ ಇಲ್ಲದ ಸಮಯದಲ್ಲಿ ಹಣ್ಣು ಕೊಡುವ ನೆಪದಲ್ಲಿ ಲೈಂಗಿಕ ದೌರ್ಜನ್ಯ ನಡೆಸುತ್ತಿದ್ದರು ಎಂದು ದೋಷಾರೋಪಟ್ಟಿಯಲ್ಲಿ ಉಲ್ಲೇಖವಾಗಿದೆ.

ಪ್ರಜ್ವಲ್ ರೇವಣ್ಣ ಹೊಳೆ ನರಸೀಪುರದ ಮನೆಯಲ್ಲಿ ಮನೆಗೆಲಸದ ಮಹಿಳೆಯನ್ನು ಲೈಂಗಿಕವಾಗಿ ಶೋಷಿಸಿದ್ದಾರೆ. ಆಗಾಗ ಸಂತ್ರಸ್ತೆಗೆ ಪೋನ್ ಕರೆ ಮಾಡಿ ಲೈಂಗಿಕ ಕಿರುಕುಳ ನೀಡುತ್ತಿದ್ದರು. ಅಲ್ಲದೆ, ಬೆಂಗಳೂರಿನ ಬಸವನಗುಡಿ ಮನೆಯಲ್ಲಿ ಪ್ರಜ್ವಲ್ ರೇವಣ್ಣ, ಸಂತ್ರಸ್ತೆ ಮೇಲೆ ಅತ್ಯಾಚಾರ ಎಸಗಿದ್ದರು. ಅತ್ಯಾಚಾರ ಮಾಡುತ್ತಲೇ ತಮ್ಮ ಮೊಬೈಲ್ನಿಂದ ರೆಕಾರ್ಡ್ ಮಾಡಿಕೊಂಡಿದ್ದರು. ಇದಲ್ಲದೆ ಈ ವಿಚಾರವನ್ನು ಯಾರಿಗಾದರು ಹೇಳಿದರೆ ನಿನ್ನ ಪತಿಯನ್ನು ಜೈಲಿಗೆ ಕಳುಹಿಸುವುದಾಗಿ ಬೆದರಿಕೆ ಹಾಕಿದ್ದರು. ಮತ್ತೆ ನಿನ್ನ ಮಗಳಿಗೂ ಇದೇ ಗತಿ ಮಾಡುತ್ತೇನೆ ಎಂದು ಬೆದರಿಕೆ ಹಾಕಿದ್ದರು ಎಂದು ತನಿಖೆ ವೇಳೆ ತಿಳಿದು ಬಂದಿದೆ.

ಈ ಎಲ್ಲ ಮಾಹಿತಿ ಬಹಿರಂಗಗೊಳ್ಳುತ್ತಿದ್ದಂತೆ ಕಾನೂನು ಕ್ರಮದಿಂದ ತಪ್ಪಿಸಿಕೊಳ್ಳಲು ಮತ್ತು ಸಾಕ್ಷ್ಯಗಳನ್ನು ನಾಶ ಮಾಡುವ ಸಲುವಾಗಿಯೇ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ತೆರಳಿರುವುದು ತನಿಖೆಯಲ್ಲಿ ದೃಢಪಟ್ಟಿದೆ. ಅಶ್ಲೀಲ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಲು ಪ್ರಜ್ವಲ್ ಕಾರಣ ಎಂದು ದೋಷಾರೋಪಪಟ್ಟಿಯಲ್ಲಿ ಉಲ್ಲೇಖಿಸಿದ್ದಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page