
ಹೊಸದಿಲ್ಲಿ: ಈಗಾಗಲೇ ಅತ್ಯಾಚಾರ ಪ್ರಕರಣದಲ್ಲಿ ಜೈಲು ಪಾಲಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಅವರ ಮೇಲಿರುವ ಆರೋಪಗಳು ಗಂಭೀರವಾಗಿದೆ ಎಂದು ಹೇಳಿ ಅರ್ಜಿಯನ್ನು ವಜಾಗೊಳಿಸಿದೆ.
ನ್ಯಾ.ಬೆಲಾ ಎಂ ತ್ರಿವೇದಿ ಮತ್ತು ಸತೀಶ್ ಚಂದ್ರ ಶರ್ಮಾ ಅವರಿದ್ದ ಪೀಠವು, ನವೆಂಬರ್ 11ರಂದು ಅರ್ಜಿ ವಿಚಾರಣೆ ನಡೆಸಿದ್ದು ಈ ವೇಳೆ ಆರೋಪದ ಗಂಭೀರತೆಯನ್ನು ಪರಿಗಣಿಸಿ ರೇವಣ್ಣ ಅವರ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ. ಪ್ರಜ್ವಲ್ ರೇವಣ್ಣ ಪರ ಹಿರಿಯ ವಕೀಲ ಮುಕುಲ್ ರೋಹಟಗಿ ವಾದ ಮಂಡಿಸಿದ್ದು ರೇವಣ್ಣ ವಿರುದ್ಧ ದಾಖಲಾಗಿರುವ ದೂರಿನಲ್ಲಿ ಅತ್ಯಾಚಾರದ ಉಲ್ಲೇಖವಿಲ್ಲ ಎಂದು ವಾದಿಸಿದ್ದು ಆದರೆ ಪ್ರಜ್ವಲ್ ರೇವಣ್ಣ ವಿರುದ್ಧ ಹಲವಾರು ದೂರುಗಳಿವೆ ಎಂದು ಪೀಠವು ಗಮನಿಸಿತು.
ನಾವು ಆರು ತಿಂಗಳ ಬಳಿಕ ಅರ್ಜಿ ಸಲ್ಲಿಸಬಹುದೇ ಎಂದು ಪ್ರಜ್ವಲ್ ರೇವಣ್ಣ ಪರ ವಕೀಲರಾದ ರೋಹಟಗಿ ಪ್ರಶ್ನಿಸಿದ್ದು ಇದಕ್ಕೆ ಉತ್ತರಿಸಿದ ನ್ಯಾ.ತ್ರಿವೇದಿ, “ನಾವು ಏನನ್ನೂ ಹೇಳುತ್ತಿಲ್ಲ” ಎಂದು ಹೇಳಿದರು.



















