26.1 C
Udupi
Wednesday, April 22, 2026
spot_img
spot_img
HomeBlogಪ್ರತಿ ಜಿಲ್ಲೆಯಲ್ಲಿ ಕಿಮೋಥೆರಪಿ ಡೇಕೇರ್ ಕೇಂದ್ರಗಳನ್ನು ಆರಂಭಿಸುವುದಾಗಿ ಘೋಷಣೆ ಮಾಡಿದ ಕರ್ನಾಟಕ ಸರಕಾರ

ಪ್ರತಿ ಜಿಲ್ಲೆಯಲ್ಲಿ ಕಿಮೋಥೆರಪಿ ಡೇಕೇರ್ ಕೇಂದ್ರಗಳನ್ನು ಆರಂಭಿಸುವುದಾಗಿ ಘೋಷಣೆ ಮಾಡಿದ ಕರ್ನಾಟಕ ಸರಕಾರ

ಬೆಂಗಳೂರು: ಬೆಂಗಳೂರಿನ ಕೆಸಿ ಜನರಲ್ ಆಸ್ಪತ್ರೆ ಆವರಣದಲ್ಲಿ 150 ಕೋಟಿ ರೂ. ವೆಚ್ಚದಲ್ಲಿ 200 ಹಾಸಿಗೆಗಳ ತಾಯಿ ಮತ್ತು ಮಕ್ಕಳ ಆಸ್ಪತ್ರೆ, ಶವಾಗಾರ, ಅಡುಗೆ ಕೋಣೆ, ಬೋಧನಾ ಬ್ಲಾಕ್, ಲಾಂಡ್ರಿ ಬ್ಲಾಕ್ ಮತ್ತು ಜೈವಿಕ ವೈದ್ಯಕೀಯ ತ್ಯಾಜ್ಯ ಕೊಠಡಿ ನಿರ್ಮಾಣಕ್ಕೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಅವರೊಂದಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮುಂದಿನ ತಿಂಗಳೊಳಗೆ ಕರ್ನಾಟಕದ ಎಲ್ಲಾ ಜಿಲ್ಲಾ ಆಸ್ಪತ್ರೆಗಳಲ್ಲಿ ಕಿಮೋಥೆರಪಿ ಡೇಕೇರ್ ಸೆಂಟರ್‌ಗಳನ್ನು ಆರಂಭಿಸಲಾಗುವುದು ಎಂದು ಘೋಷಣೆ ಮಾಡಿದ್ದಾರೆ.

ರಾಜ್ಯಾದ್ಯಂತ ಜಿಲ್ಲಾ ಆಸ್ಪತ್ರೆಗಳಲ್ಲಿ ಕಿಮೋಥೆರಪಿ ಡೇಕೇರ್ ಕೇಂದ್ರಗಳನ್ನು ಸ್ಥಾಪಿಸಿದರೆ, ಗ್ರಾಮೀಣ ಭಾಗದ ಕ್ಯಾನ್ಸರ್ ರೋಗಿಗಳು ದೂರ ಪ್ರಯಾಣಿಸುವ ಅಗತ್ಯವಿಲ್ಲ. ಹೀಗಾಗಿ ಒಂದು ತಿಂಗಳ ಅವಧಿಯಲ್ಲಿ ಕಿಮೋಥೆರಪಿ ಡೇಕೇರ್ ಸೆಂಟರ್‌ಗಳನ್ನು ಸ್ಥಾಪಿಸಲಾಗುವುದು ಎಂದು ಅವರು ಹೇಳಿದ್ದಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page