31.4 C
Udupi
Wednesday, April 22, 2026
spot_img
spot_img
HomeBlogಪ್ರಪೋಸ್ ನೆಪದಲ್ಲಿ ಪ್ರಿಯಕರನಿಗೆ ಬೆಂಕಿ ಹಚ್ಚಿದ ಪ್ರಿಯತಮೆ: ಬ್ಯಾಡರಹಳ್ಳಿಯಲ್ಲಿ ಭೀಕರ ಹತ್ಯೆ

ಪ್ರಪೋಸ್ ನೆಪದಲ್ಲಿ ಪ್ರಿಯಕರನಿಗೆ ಬೆಂಕಿ ಹಚ್ಚಿದ ಪ್ರಿಯತಮೆ: ಬ್ಯಾಡರಹಳ್ಳಿಯಲ್ಲಿ ಭೀಕರ ಹತ್ಯೆ

ಬೆಂಗಳೂರು: ಪ್ರೀತಿ ಸಂಬಂಧಗಳ ಹೆಸರಿನಲ್ಲಿ ನಡೆಯುವ ದುರಂತಗಳು ದಿನೇದಿನೇ ಹೆಚ್ಚುತ್ತಿವೆ. ಇದೇ ರೀತಿಯ ಭೀಕರ ಘಟನೆ ಬ್ಯಾಡರಹಳ್ಳಿ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ. ಯುವತಿಯೊಬ್ಬಳು ‘ವೆಸ್ಟರ್ನ್ ಸ್ಟೈಲ್‌ನಲ್ಲಿ ಪ್ರಪೋಸ್ ಮಾಡುತ್ತೇನೆ’ ಎಂದು ನಂಬಿಸಿ, ಪ್ರಿಯಕರನ ಕೈ-ಕಾಲು ಕಟ್ಟಿ, ಕಣ್ಣಿಗೆ ಬಟ್ಟೆ ಹಾಕಿ ಪೆಟ್ರೋಲ್ ಸುರಿದು ಹತ್ಯೆ ಮಾಡಿದ ಆರೋಪ ಕೇಳಿಬಂದಿದೆ.

ಮೃತ ಕಿರಣ್ ಹಾಗೂ ಯುವತಿ ಒಂದೇ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ಇತ್ತೀಚೆಗೆ ಪ್ರೀತಿಸುತ್ತಿದ್ದರು. ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಿರಣ್ ಮನೆಗೆ ಬಂದಾಗ, ಯುವತಿ ಈ ಕೃತ್ಯ ಎಸಗಿದ್ದಾಳೆ ಎನ್ನಲಾಗಿದೆ. ಮೊದಲು ಕಣ್ಣಿಗೆ ಬಟ್ಟೆ ಕಟ್ಟಿ, ಕೈ-ಕಾಲುಗಳನ್ನು ಬಿಗಿಯಾಗಿ ಕಟ್ಟಿ, ನಂತರ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾಳೆ. ಅಲ್ಲದೆ ಘಟನೆಯನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿದ್ದಾಳೆ ಎಂಬ ಮಾಹಿತಿ ಲಭ್ಯವಾಗಿದೆ.

ಆರಂಭದಲ್ಲಿ ಆತ್ಮಹತ್ಯೆ ಎಂದು ಹೇಳಿದ ಯುವತಿಯ ಹೇಳಿಕೆ ಸಿಸಿಟಿವಿ ದೃಶ್ಯಗಳಿಂದ ಅನುಮಾನಾಸ್ಪದವಾಗಿದೆ. ಪೆಟ್ರೋಲ್ ಯುವತಿಯೇ ತಂದಿದ್ದಾಳೆ ಎನ್ನುವ ಶಂಕೆ ವ್ಯಕ್ತವಾಗಿದೆ. ಪೊಲೀಸರು ಯುವತಿಯನ್ನು ವಶಕ್ಕೆ ಪಡೆದು, ಘಟನೆಗೆ ಸಂಬಂಧಿಸಿದಂತೆ ತನಿಖೆ ಮುಂದುವರೆಸಿದ್ದಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page