25 ಲಕ್ಷ ರೂ. ಪರಿಹಾರ ಘೋಷಣೆ, ನ್ಯಾಯಾಂಗ ತನಿಖೆಗೆ ಆದೇಶ

ಲಕ್ನೋ: ಉತ್ತರ ಪ್ರದೇಶದ ಪ್ರಯಾಗರಾಜ್ ನಲ್ಲಿ ನಡೆದ ಮಹಾ ಕುಂಭಮೇಳದಲ್ಲಿ ಕಾಲ್ತುಳಿತಕ್ಕೆ 30 ಮಂದಿ ಸಾವು ಕಂಡಿದ್ದು ಹೀಗಾಗಿ ಇಂದು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ ಎಂದು ವರದಿಯಾಗಿದೆ.
ಈ ಕುರಿತು ಬೇಸರ ವ್ಯಕ್ತಪಡಿಸಿರುವ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್, ಘಟನೆಯ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶ ನೀಡಿದ್ದು ಅದರೊಂದಿಗೆ ಪ್ರಯಾಗ್‌ರಾಜ್‌ನಲ್ಲಿ ನಡೆದ ಘಟನೆಯಲ್ಲಿ ಒಟ್ಟು 30 ಮಂದಿ ಸಾವು ಕಂಡಿದ್ದನ್ನು ಖಚಿತಪಡಿಸಿದ್ದು, 60 ಮಂದಿ ಗಾಯಗೊಂಡಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. ಕಾಲ್ತುಳಿತದಲ್ಲಿ ಮೃತಪಟ್ಟ ವ್ಯಕ್ತಿಗಳಿಗೆ ತಲಾ 25 ಲಕ್ಷ ರೂ. ಪರಿಹಾರ ಘೋಷಿಸಲಾಗಿದೆ ಎಂದು ತಿಳಿದುಬಂದಿದೆ.
ಫೆ.1ರಂದು 50ಕ್ಕೂ ಹೆಚ್ಚು ದೇಶಗಳ ಉಪಾಧ್ಯಕ್ಷರು ಹಾಗೂ ರಾಯಭಾರಿಗಳು ಆಗಮಿಸಲಿದ್ದು ಫೆ.5ರಂದು ಪ್ರಧಾನಿ ನರೇಂದ್ರ ಮೋದಿ ತ್ರಿವೇಣಿ ಸಂಗಮದಲ್ಲಿ ಸ್ನಾನ ಮಾಡಲಿದ್ದಾರೆ. ಈ ಹಿನ್ನೆಲೆ ಯಾವುದೇ ಸಮಸ್ಯೆಯಾಗದಂತೆ ಎಚ್ಚರಿಕೆ ವಹಿಸುವ ಸಲುವಾಗಿ ಯೋಗಿ ಖುದ್ದು ಪ್ರಯಾಗ್‌ರಾಜ್‌ಗೆ ತೆರಳಿ ವ್ಯವಸ್ಥೆಗಳ ಪರಿಶೀಲನೆ ನಡೆಸಲಿದ್ದಾರೆ.