
ನವದೆಹಲಿ/ಮಂಗಳೂರು: ರಾಷ್ಟ್ರೀಯ ತನಿಖಾ ಸಂಸ್ಥೆಯು ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಪ್ರಮುಖ ಆರೋಪಿಯಾದ ಅತೀಖ್ ಅಹ್ಮದ್ ಎಂಬಾತನನ್ನು ಬಂಧಿಸಿದ್ದು ಈವರೆಗೆ ಪ್ರಕರಣದಲ್ಲಿ 21 ಆರೋಪಿಗಳನ್ನು ಅರೆಸ್ಟ್ ಮಾಡಲಾಗಿದೆ.
2022 ರ ಜುಲೈನಲ್ಲಿ ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಸದಸ್ಯರು ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆ ಗ್ರಾಮದಲ್ಲಿ ನೆಟ್ಟಾರು ಅವರನ್ನು ಬರ್ಬರವಾಗಿ ಹತ್ಯೆ ಮಾಡಿದ್ದರು. 21 ಆರೋಪಿಗಳನ್ನು ಈಗಾಗಲೇ ಬಂಧಿಸಿದ್ದು ಇನ್ನುಳಿದ ಆರು ಆರೋಪಿಗಳನ್ನು ಪತ್ತೆಹಚ್ಚಲು ತನಿಖೆ ಮುಂದುವರಿದಿದೆ.





















