
ಭಾರತ ಸರ್ಕಾರದ ಸಾರ್ವಜನಿಕ ಸೇವಾ ಪ್ರಸಾರ ಸಂಸ್ಥೆಯಾದ ಪ್ರಸಾರ ಭಾರತಿ, ಖಾಲಿ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿದ್ದು ದೇಶಾದ್ಯಂತ ಆರು ವಲಯಗಳಲ್ಲಿ ಅಂದರೆ ಉತ್ತರ, ದಕ್ಷಿಣ, ಪೂರ್ವ, ಪಶ್ಚಿಮ, ನವದೆಹಲಿ ಮತ್ತು ಈಶಾನ್ಯ ವಲಯಗಳಲ್ಲಿ ಖಾಲಿ ಇರುವ ತಾಂತ್ರಿಕ ಇಂಟರ್ನ್‌ಗಳ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸುವ ಅಧಿಸೂಚನೆಯನ್ನು ಹೊರಡಿಸಿದೆ.
ಈ ಎಲ್ಲಾ ಹುದ್ದೆಗಳನ್ನು ತಾತ್ಕಾಲಿಕ ಆಧಾರದ ಮೇಲೆ ಮಾತ್ರ ಭರ್ತಿ ಮಾಡಲಾಗುತ್ತಿದ್ದು ಈ ಅಧಿಸೂಚನೆಯಡಿಯಲ್ಲಿ ಒಟ್ಟು 421 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಅರ್ಹ ಅಭ್ಯರ್ಥಿಗಳು ಜುಲೈ 1 ರೊಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರಗಳು:
- ದಕ್ಷಿಣ ವಲಯದಲ್ಲಿ ತಾಂತ್ರಿಕ ಇಂಟರ್ನ್‌ಗಳ ಹುದ್ದೆಗಳ ಸಂಖ್ಯೆ: 63
- ಪೂರ್ವ ವಲಯದಲ್ಲಿ ತಾಂತ್ರಿಕ ಇಂಟರ್ನ್‌ಗಳ ಹುದ್ದೆಗಳ ಸಂಖ್ಯೆ: 65
- ಪಶ್ಚಿಮ ವಲಯದಲ್ಲಿ ತಾಂತ್ರಿಕ ಇಂಟರ್ನ್‌ಗಳ ಹುದ್ದೆಗಳ ಸಂಖ್ಯೆ: 66
- ಈಶಾನ್ಯ ವಲಯದಲ್ಲಿ ತಾಂತ್ರಿಕ ಇಂಟರ್ನ್‌ಗಳ ಹುದ್ದೆಗಳ ಸಂಖ್ಯೆ: 126
- ನವದೆಹಲಿಯಲ್ಲಿ ತಾಂತ್ರಿಕ ಇಂಟರ್ನ್‌ಗಳ ಹುದ್ದೆಗಳ ಸಂಖ್ಯೆ: 101
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಂಬಂಧಿತ ವಿಭಾಗದಲ್ಲಿ ಎಂಜಿನಿಯರಿಂಗ್ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದಿರಬೇಕು. ಎಲೆಕ್ಟ್ರಾನಿಕ್ಸ್, ದೂರಸಂಪರ್ಕ, ಎಲೆಕ್ಟ್ರಿಕಲ್, ಸಿವಿಲ್, ಐಟಿ ಅಥವಾ ಕಂಪ್ಯೂಟರ್ ಸೈನ್ಸ್ ವಿಭಾಗಗಳಲ್ಲಿ ಕನಿಷ್ಠ ಶೇ. 65 ರಷ್ಟು ಉತ್ತೀರ್ಣರಾದವರಿಗೆ ಆದ್ಯತೆ ನೀಡಲಾಗುವುದು. 2024-25 ರ ಫ್ರೆಶರ್ಸ್ ಪದವೀಧರರು ಸಹ ಅರ್ಜಿ ಸಲ್ಲಿಸಬಹುದಾಗಿದ್ದು ಅಭ್ಯರ್ಥಿಗಳ ವಯಸ್ಸಿನ ಮಿತಿ 30 ವರ್ಷ.
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಲಿದ್ದು ಆಯ್ಕೆಯಾದವರಿಗೆ ಇಂಟರ್ನ್‌ಶಿಪ್ ಕಾರ್ಯಕ್ರಮವು ಒಂದು ವರ್ಷದ ಅವಧಿಯದ್ದಾಗಿರುತ್ತದೆ. ಈ ಅವಧಿಯಲ್ಲಿ, ತಿಂಗಳಿಗೆ ರೂ. 25,000 ಸ್ಟೈಫಂಡ್ ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ:
- ಪ್ರಸಾರ ಭಾರತಿ prasarbharati.gov.in ನ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬೇಕು.
- ನೇಮಕಾತಿ ಅಧಿಸೂಚನೆಯನ್ನು ಓದಿ ಆನ್‌ಲೈನ್ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು.
- ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ ಅರ್ಜಿ ನಮೂನೆಯನ್ನು ಸಲ್ಲಿಸಬೇಕು.