
ಬಾಲಿವುಡ್ ಖ್ಯಾತ ನಟಿ ದೀಪಿಕಾ ಪಡುಕೋಣೆ ಮತ್ತು ರಣವೀರ್ ಸಿಂಗ್ ದಂಪತಿಗಳು ತಾವು ಪೋಷಕರಾಗುತ್ತಿರುವ ಖುಷಿ ವಿಚಾರವನ್ನು ಹಂಚಿಕೊಂಡಿದ್ದು ನಟಿಯ ಪ್ರೆಗ್ನನ್ಸಿಯ ಬಗ್ಗೆ ಹಲವಾರು ವಿಚಾರಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದವು.

ಇದೀಗ ಈ ಎಲ್ಲಾ ಆರೋಪಗಳಿಗೆ ನಟಿ ಫೋಟೋಶೂಟ್ ನ ಮೂಲಕ ಉತ್ತರ ನೀಡಿದ್ದಾರೆ. ಪತಿ ರಣವೀರ್ ಸಿಂಗ್ ಜೊತೆಯಾಗಿ ಪ್ರೆಗ್ನೆನ್ಸಿ ಫೋಟೋಶೂಟ್ ಮಾಡಿಸಿಕೊಂಡಿದ್ದು ಎಲ್ಲಾ ಚಿತ್ರಗಳನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಸಿನಿಮಾ ರಂಗದ ಹಲವು ನಟ ನಟಿಯರು ದೀಪಿಕಾ ಪಡುಕೋಣೆ ಅವರಿಗೆ ಶುಭ ಹಾರೈಸಿದ್ದಾರೆ.














