
ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘ (ರಿ ) ಬೆಂಗಳೂರು ಇದರ ಹೆಬ್ರಿ ಹಾಗೂ ಕಾರ್ಕಳ ತಾಲೂಕು ಶಾಖೆಯ ಉದ್ಘಾಟನೆ ಹಾಗೂ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವು ಫೆಬ್ರವರಿ 11ರಂದು ಸಾಯಂಕಾಲ 5 ಗಂಟೆಗೆ ಕಾರ್ಕಳದ ಹೋಟೆಲ್ ಪ್ರಕಾಶ್ ಸಭಾಂಗಣದಲ್ಲಿ ನಡೆಯಲಿದೆ.
ಈ ಕಾರ್ಯಕ್ರಮವನ್ನು ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದ ರಾಜ್ಯ ಅಧ್ಯಕ್ಷರಾದ ಜಿ. ಎಂ ರಾಜಶೇಖರ್ ಉದ್ಘಾಟನೆ ಮಾಡಲಿದ್ದಾರೆ.ಅಧ್ಯಕ್ಷತೆಯನ್ನು ಪತ್ರಕರ್ತರ ಸಂಘದ ಅಧ್ಯಕ್ಷರಾದ ನಳಿನಿ ಎಸ್ ಸುವರ್ಣ ವಹಿಸಿ ಕೊಳ್ಳಲಿದ್ದಾರೆ.ಮುಖ್ಯ ಅತಿಥಿಗಳಾಗಿ ಶಾಸಕ ವಿ ಸುನಿಲ್ ಕುಮಾರ್, ಕಾಂಗ್ರೆಸ್ ನಾಯಕ ಮುನಿಯಾಲು ಉದಯ ಶೆಟ್ಟಿ, ಉದ್ಯಮಿ ಹಾಗೂ ಸಮಾಜ ಸೇವಕರಾದ ಬೋಳ ಪ್ರಶಾಂತ್ ಕಾಮತ್, ಫೆಡರೇಷನ್ ಆಫ್ ಕ್ವಾರಿ ಮತ್ತು ಸ್ಟೋನ್ ಕ್ರಷರ್ ಓನರ್ ಅಸೋಸಿಯೆಷನ್ (ರಿ ) ಬೆಂಗಳೂರು ಇದರ ರಾಜ್ಯ ಅಧ್ಯಕ್ಷ ಡಾ. ರವೀಂದ್ರ ಶೆಟ್ಟಿ, ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಅಧ್ಯಕ್ಷರಾದ ಮಿತ್ರ ಪ್ರಭಾ ಹೆಗ್ಡೆ ಭಾಗವಹಿಸಲಿದ್ದಾರೆ.ರಾಜ್ಯ ಉಪಾಧ್ಯಕ್ಷರಾದ ಕೃಷ್ಣಪ್ಪ, ರಾಜ್ಯ ಕಾರ್ಯದರ್ಶಿ ವಸಂತ್ ಕುಮಾರ್, ರಾಜ್ಯ ಕೋಶಾಧಿಕಾರಿ ಮಂಜುನಾಥ್, ಉಡುಪಿ ಜಿಲ್ಲಾ ಅಧ್ಯಕ್ಷ ಎಂ. ಎನ್. ಕೊಟ್ಟಾರಿ ಭಾಗವಹಿಸಲಿದ್ದಾರೆ.
ಈ ಕಾರ್ಯಕ್ರಮದಲ್ಲಿ ಎಲ್ಲರೂ ಪಾಲ್ಗೊಂಡು ಸಹಕಾರ ನೀಡುವಂತೆ ಸಂಘವು ಮನವಿ ಮಾಡಿದೆ.



















