
ಚಿತ್ರದುರ್ಗ: 2ನೇ ಅಪರ ಜಿಲ್ಲಾ & ಸತ್ರ ನ್ಯಾಯಾಲಯವು ಮುರುಘಾ ಮಠದ ಶಿವಮೂರ್ತಿ ಸ್ವಾಮೀಜಿ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮುರುಘಾ ಮಠದ ಶಿವಮೂರ್ತಿ ಸ್ವಾಮಿಯನ್ನು ನಿರ್ದೋಷಿ ಎಂದು ತೀರ್ಪು ಪ್ರಕಟಿಸಿದೆ.
ಶಿವಮೂರ್ತಿ ಸ್ವಾಮೀಜಿ ವಿರುದ್ಧ ಎರಡು ಪೋಕ್ಸೋ ಪ್ರಕರಣಗಳು ದಾಖಲಾಗಿದ್ದು ಎರಡೂ ಪ್ರಕರಣಗಳಲ್ಲಿ ಜಾಮೀನು ಪಡೆದುಕೊಂಡಿದ್ದ ಸ್ವಾಮೀಜಿ, ಇಂದು ತೀರ್ಪು ಪ್ರಕಟ ಹಿನ್ನೆಲೆ ದಾವಣಗೆರೆಯ ವಿರಕ್ತ ಮಠದಿಂದ ಚಿತ್ರದುರ್ಗಕ್ಕೆ ಬಂದಿದ್ದರು.
ಪ್ರಕರಣದ ಹಿನ್ನೆಲೆ:
ಚಿತ್ರದುರ್ಗದಲ್ಲಿರುವ ಮುರುಘಾ ಮಠದ ಪೀಠಾಧಿಪತಿಯಾಗಿದ್ದ ಶಿವಮೂರ್ತಿ ಸ್ವಾಮೀಜಿ ವಿರುದ್ದ 2022ರ ಆಗಸ್ಟ್ 26ರಂದು ಮೈಸೂರಿನ ನಜರಾಬಾದ್ ಪೊಲೀಸ್ ಠಾಣೆಯಲ್ಲಿ ಮುರುಘಾ ಮಠದ ವಸತಿ ನಿಲಯದಲ್ಲಿದ್ದ ಇಬ್ಬರು ಅಪ್ರಾಪ್ತೆಯರ ಹೇಳಿಕೆಯನ್ನಾಧರಿಸಿ ಫೋಕ್ಸೊ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಎ1 ಮುರುಘಾಶ್ರೀ, ಎ2 ಲೇಡಿ ವಾರ್ಡನ್ ರಶ್ಮಿ, ಎ3 ಬಸವಾದಿತ್ಯ, ಎ4 ಮ್ಯಾನೇಜರ್ ಪರಮಶಿವಯ್ಯ, ಎ5 ವಕೀಲ ಗಂಗಾಧರಯ್ಯ ವಿರುದ್ಧ ಕೇಸ್ ದಾಖಲಾಗಿದ್ದು ನಂತರ ಆಗಸ್ಟ್ 26ರಂದು ಮೈಸೂರಿನಿಂದ ಚಿತ್ರದುರ್ಗಕ್ಕೆ ಪ್ರಕರಣ ವರ್ಗಾವಣೆಯಾಗಿತ್ತು.






















































