
ಬೆಂಗಳೂರು: ಭಾರತೀಯ ಹವಾಮಾನ ಇಲಾಖೆಯು ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಪರಿಣಾಮ ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ನೆಚ್ಚರಿಕೆ ನೀಡಿದೆ.
ಪೂರ್ವ ಮುಂಗಾರು ಚುರುಕುಗೊಂಡಿದ್ದು, ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಇಂದೂ ಸಹ ಮಳೆಯ ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ವಾಡಿಕೆಗಿಂತ ಉತ್ತಮ ಮಳೆಯಾಗುತ್ತಿದ್ದು, ಉಡುಪಿ, ಉತ್ತರ ಕನ್ನಡದಲ್ಲಿ ಗುಡುಗು ಸಹಿತ ಮಳೆಯ ಎಚ್ಚರಿಕೆ ನೀಡಿದೆ. 40-50 ಕಿ.ಮೀ ವೇಗದಲ್ಲಿ ಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ.
ಕೋಲಾರ, ಬಳ್ಳಾರಿ, ಬೆಂಗಳೂರು ನಗರ, ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ತುಮಕೂರು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆ ನೀಡಲಾಗಿದ್ದು ಉಳಿದಂತೆ ಬಾಗಲಕೋಟೆ, ಬೆಳಗಾವಿ ಬೀದರ್, ಧಾರವಾಡ,ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಚಿತ್ರದುರ್ಗ, ರಾಮನಗರ, ಶಿವಮೊಗ್ಗ, ವಿಜಯನಗರದಲ್ಲಿ ಒಣ ಹವೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.



















































