
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪರಂಗಿಪೇಟೆಯ ವಿದ್ಯಾರ್ಥಿ ದಿಗಂತ್ ಎಂಬಾತ ಫೆಬ್ರವರಿ 25 ರಿಂದ ನಿಗೂಢವಾಗಿ ನಾಪತ್ತೆಯಾಗಿದ್ದು ಇದೀಗ ಆತ ಇಂದು ಉಡುಪಿಯಲ್ಲಿ ಪತ್ತೆಯಾಗಿದ್ದು ಪೊಲೀಸರು ಆತನನ್ನು ಕರೆತರುತ್ತಿದ್ದಾರೆ ಎಂದು ವರದಿಯಾಗಿದೆ.
ಈ ಪ್ರಕರಣವನ್ನು ರಾಜ್ಯ ಸರ್ಕಾರ ಹಾಗೂ ಪೊಲೀಸ್ ಇಲಾಖೆಯು ಗಂಭೀರವಾಗಿ ಪರಿಗಣಿಸಿ 40ಕ್ಕೂ ಹೆಚ್ಚು ಪೊಲೀಸರ ತಂಡವು ಹುಡುಕಾಟ ನಡೆಸಿದ್ದಾರೆ. ಡಿಎಆರ್ ತಂಡದ 30 ಪೊಲೀಸರು, ರೈಲ್ವೆ ಪೊಲೀಸ್, ಅಗ್ನಿಶಾಮಕ ದಳ, ಎಫ್ ಎಸ್ ಎಲ್, ಡಾಗ್ ಸ್ಕ್ವಾಡ್, ಡ್ರೋನ್ ಕ್ಯಾಮೆರಾ ಗಳನ್ನು ಬಳಸಿ ಹುಡುಕಾಡಲು ಹರಸಾಹಸ ಪಟ್ಟಿದ್ದಾರೆ.
ಈತ ಫೆಬ್ರವರಿ 25ರಂದು ಮಂಗಳವಾರ ಸಂಜೆ ದೇವಸ್ಥಾನಕ್ಕೆ ಹೋಗುವುದಾಗಿ ಮನೆಯಲ್ಲಿ ತಿಳಿಸಿ ನಾಪತ್ತೆಯಾಗಿದ್ದು ಆತನ ಚಪ್ಪಲಿಗಳು ಹಾಗೂ ಮೊಬೈಲ್ ಫೋನ್ ಮನೆಯ ಸಮೀಪದ ರೈಲ್ವೆ ಹಳಿಯಲ್ಲಿ ಪತ್ತೆಯಾಗಿತ್ತು.



















