
ಮಂಗಳೂರು: ಮೇ 27ರಂದು ಬಂಟ್ವಾಳ ತಾಲೂಕಿನ ಕುರಿಯಾಳ ಸಮೀಪದ ಇರಾಕೋಡಿ ಎಂಬಲ್ಲಿ ಇಬ್ಬರು ಮುಸ್ಲಿಂ ಯುವಕರ ಮೇಲೆ ದುಷ್ಕರ್ಮಿಗಳು ಮಾರಕಸ್ತ್ರಗಳಿಂದ ದಾಳಿ ನಡೆಸಿದ ಪರಿಣಾಮ ಕೊಳತ್ತಮಜಲು ನಿವಾಸಿ ರಹೀಮ್ ಸ್ಥಳದಲ್ಲೇ ಮೃತಪಟ್ಟಿದ್ದು ಇನ್ನೋರ್ವ ಗಾಯಾಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ದುರ್ಘಟನೆ ನಡೆದ ಬಳಿಕ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮೇ 27ರ ಸಂಜೆ 6 ಗಂಟೆಯಿಂದ ಮೇ 30ರ ಸಂಜೆ 6ರವರೆಗೆ ನಿಷೇಧಾಜ್ಞೆ ಜಾರಿ ಮಾಡಿ ಆದೇಶ ಹೊರಡಿಸಲಾಗಿದೆ.






















































