
ಬಜಗೋಳಿ: ಮುಡಾರು ಗ್ರಾಮ ಪಂಚಾಯತ್ ನ ವಿ.ಎಸ್.ಆಚಾರ್ಯ ಸಭಾಂಗಣದಲ್ಲಿ ಮುಡಾರು ಗ್ರಾಮ ಪಂಚಾಯತ್,ನೇತ್ರಾ ಜ್ಯೋತಿ ಚಾರಿಟೇಬಲ್ ಟ್ರಸ್ಟ್ ,ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಅಸ್ಪತ್ರೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಇಲಾಖೆ,ಪ್ರಾಥಮಿಕ ಆರೋಗ್ಯ ಕೇಂದ್ರ ಬಜಗೋಳಿ ಇವರ ಸಹಯೋಗದೊಂದಿಗೆ ಉಚಿತ ನೇತ್ರ ತಪಾಸಣೆ ಹಾಗೂ ಪೊರೆ ಶಸ್ತ್ರ ಚಿಕಿತ್ಸೆ ಶಿಬಿರ ನಡೆಯಿತು.

ಈ ಕಾರ್ಯಕ್ರಮವನ್ನು ಮುಡಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶೃತಿ.ಡಿ.ಅತಿಕಾರಿ ಉದ್ಘಾಟಿಸಿದರು.ಸಭಾ ವೇದಿಕೆಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಗಿರೀಶ್, ಕಣ್ಣಿನ ತಜ್ಞರಾದ ಡಾ.ವಿಷ್ಣು, ಗ್ರಾಮ ಪಂಚಾಯತ್ ಕಾರ್ಯದರ್ಶಿ ಜಯಕರ, ಗ್ರಾಮ ಪಂಚಾಯತ್ ಸದಸ್ಯರಾದ ವಿನಯ.ಡಿ.ಬಂಗೇರ, ಪ್ರಶಾಂತ್ ಕುಮಾರ್ ,ಹರೀಶ್, ರಜತ್ ರಾಮ್ ಮೋಹನ್ ಉಪಸ್ಥಿತರಿದ್ದರು. ಶಿಬಿರದಲ್ಲಿ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದರು.ಆರೋಗ್ಯ ಕೇಂದ್ರ ಸಿಬ್ಬಂದಿ, ಪಂಚಾಯತ್ ಸಿಬ್ಬಂದಿ, ನೇತ್ರಾಲಯ ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು ಶಿಬಿರದ ಯಶಸ್ಸಿಗೆ ಸಹಕರಿಸಿದರು.
