
ಹೆಬ್ರಿ :ಹೆಬ್ರಿ ತಾಲೂಕು ಮುದ್ರಾಡಿ ಗ್ರಾಮದ ಬಲ್ಲಾಡಿ ಶ್ರೀ ಅರ್ಧನಾರೀಶ್ವರ ಅಬ್ಬಗ ದಾರಗ ದೇವಸ್ಥಾನ ಹಾಗೂ ಬ್ರಹ್ಮ ಬೈದರ್ಕಳ ಗರಡಿಯಲ್ಲಿ ವಾರ್ಷಿಕ ಮಹೋತ್ಸವ, ಶ್ರೀ ಬ್ರಹ್ಮ ಬೈದರ್ಕಳ ನೇಮೋತ್ಸವ ಭಗವದ್ಭಕ್ತರ ಸಹಕಾರದಿಂದ ನಡೆಯಿತು.
ಇದೇ ಸಂದರ್ಭದಲ್ಲಿ ಹಲವು ವರ್ಷಗಳ ಸುದೀರ್ಘ ಸೇವೆ ಸಲ್ಲಿಸಿದ ದೇವಸ್ಥಾನದ ಅರ್ಚಕರಾದ ಅಚ್ಯುತ ಭಟ್ ಉಪ್ಪಳ ಹಾಗೂ ಗರಡಿಯ ಅರ್ಚಕರಾದ ಕೊರಗ ಪೂಜಾರಿ ಬಲ್ಲಾಡಿ ಅವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಶುಭಧರ ಶೆಟ್ಟಿ,, ಜೀರ್ಣೋದ್ದಾರ ಸಮಿತಿಯ ಉಪಾಧ್ಯಕ್ಷರಾದ ಉದಯ ಹೆಗ್ಡೆ ಕೊಳಂಬೆ, ದೇವಳದ ತಂತ್ರಿಗಳಾದ ವಿ. ರಾಮಚಂದ್ರ ಭಟ್ ಕಬ್ಬಿನಾಲೆ, ದೇವಸ್ಥಾನದ ಅರ್ಚಕರಾದ ಶ್ರೀಶ ಭಟ್,ಗರಡಿ ಅರ್ಚಕರಾದ ಸಂತೋಷ್ ಆರ್. ಪೂಜಾರಿ, ವ್ಯವಸ್ಥಾಪನ ಸಮಿತಿ ಮತ್ತು ಜೀರ್ಣೋದ್ದಾರ ಸಮಿತಿಯ ಸರ್ವಸದಸ್ಯರು ಉಪಸ್ಥಿತರಿದ್ದರು. ಬಲ್ಲಾಡಿ ಚಂದ್ರಶೇಖರ ಭಟ್ ಕಾರ್ಯಕ್ರಮ ನಿರೂಪಿಸಿ, ವ್ಯವಸ್ಥಾಪನ ಸಮಿತಿ ಕಾರ್ಯದರ್ಶಿ ಎಸ್. ಟಿ. ಶೆಟ್ಟಿಗಾರ್ ಸ್ವಾಗತಿಸಿ, ವಂದಿಸಿದರು.