
ಬೆಂಗಳೂರು: ಈಗಾಗಲೇ ಕೆಲವು ಬಾರಿ ಸರ್ಕಾರದ ವಿರುದ್ಧ ಸಮರ ಸಾರಿದ್ದ ಗುತ್ತಿಗೆದಾರರು ಇದೀಗ ಮತ್ತೆ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಬಾಕಿ ಬಿಲ್ ಪಾವತಿ, ಕಮಿಷನ್ಸ್ ಸ್ಥಗಿತಗೊಳಿಸದಿದ್ದರೆ ಹೈಕಮಾಂಡ್‌ಗೆ ಮಾಹಿತಿ ನೀಡುತ್ತೇವೆ ಎಂದು ಎಚ್ಚರಿಸಿದ್ದಾರೆ.
ಇದರ ಬೆನ್ನಲ್ಲೇ ಎಚ್ಚೆತ್ತುಕೊಂಡ ಡಿಸಿಎಂ ಡಿಕೆ ಶಿವಕುಮಾರ್ ಗುತ್ತಿಗೆದಾರರ ಜೊತೆ ಇಂದು ವಿಧಾನಸೌಧದಲ್ಲಿ ಸಭೆ ನಡೆಸಲು ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ.






















































