
ಬಾಲಿವುಡ್ ನಟಿ ಮಲೈಕಾ ಅರೋರಾ ತಂದೆ ಅನಿಲ್ ಅರೋರಾ ಮುಂಬೈ ಬಾಂದ್ರಾದ ತಮ್ಮ ಮನೆಯ ಟೆರೇಸ್‌ನಿಂದ ಹಾರಿ ಆತ್ಯಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.
ಇಂದು ಬೆಳಗ್ಗೆ ತಮ್ಮ ಮನೆಯ 7ನೇ ಮಹಡಿಯಿಂದ ಬಿದ್ದು ಮಲೈಕಾ ತಂದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ನಿವಾಸದ ಬಳಿ ಪೊಲೀಸರ ಜೊತೆ ನಟಿಯ ಮಾಜಿ ಪತಿ ಅರ್ಬಾಜ್ ಖಾನ್ ಕೂಡ ಭೇಟಿ ನೀಡಿದ್ದಾರೆ.
ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿ ತನಿಖೆ ನಡೆಸುತ್ತಿದ್ದಾರೆ. ಅನಿಲ್ ಅರೋರಾ ಅವರ ಆತ್ಮಹತ್ಯೆಗೆ ಕಾರಣವೇನು ಎಂಬುದು ಈವರೆಗೂ ತಿಳಿದು ಬಂದಿಲ್ಲ.













