24.3 C
Udupi
Tuesday, March 10, 2026
spot_img
spot_img
HomeBlogಬಾಲಿವುಡ್ ನಟ ಧರ್ಮೇಂದ್ರ ನಿಧನ

ಬಾಲಿವುಡ್ ನಟ ಧರ್ಮೇಂದ್ರ ನಿಧನ

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಖ್ಯಾತ ಬಾಲಿವುಡ್ ನಟ ಧರ್ಮೇಂದ್ರ ಅವರು ಇಂದು ನಿಧನರಾಗಿದ್ದಾರೆ. 89 ವರ್ಷ ವಯಸ್ಸಿನ ಧರ್ಮೇಂದ್ರ ಅವರಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದು ಬಳಿಕ ಅವರನ್ನು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೀವ್ರ ನಿಗಾ ಘಟಕದಲ್ಲಿ ಧರ್ಮೇಂದ್ರ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು ಆದರೆ ಚಿಕಿತ್ಸೆ ಫಲಿಸದೇ ಧರ್ಮೇಂದ್ರ ಅವರು ಮೃತಪಟ್ಟಿದ್ದಾರೆ.

ನಟನಾಗಿ, ನಿರ್ಮಾಪಕನಾಗಿ ಚಿತ್ರರಂಗದಲ್ಲಿ 6 ದಶಕಗಳ ಕಾಲ ಸಕ್ರಿಯರಾಗಿದ್ದ ಧರ್ಮೇಂದ್ರ ಅವರು ಇಳಿ ವಯಸ್ಸಿನಲ್ಲೂ ಕೂಡ ನಟಿಸುವುದು ನಿಲ್ಲಿಸದೆ ಚಿಕ್ಕ-ಪುಟ್ಟ ಪಾತ್ರಗಳನ್ನು ಮಾಡುತ್ತಿದ್ದರು.

ಸಿನಿಮಾ ಮಾತ್ರವಲ್ಲದೇ ರಾಜಕೀಯ ಕ್ಷೇತ್ರದಲ್ಲೂ ತಮ್ಮನ್ನು ತಾವು ತೊಡಗಿಸಿಕೊಂಡಿದ್ದ ಧರ್ಮೇಂದ್ರ ಅವರು 2004ರಿಂದ 2009ರ ತನಕ ಭಾರತೀಯ ಜನತಾ ಪಕ್ಷದಿಂದ ಸಂಸದನಾಗಿ ಕೆಲಸ ಮಾಡಿದ್ದರು. ಇದೀಗ ಅವರ ಅಗಲುವಿಕೆಯಿಂದ ಕೋಟ್ಯಂತರ ಅಭಿಮಾನಿಗಳಿಗೆ ನೋವಾಗಿದೆ.

spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page