
ಉಡುಪಿ: ರಾಜ್ಯ ಕಾರ್ಮಿಕ ಸಚಿವ ಸಂತೋಷ್ ಲಾಡ್ ಕಾಂಗ್ರೆಸ್ ಶಾಸಕ ಪಪ್ಪಿ ಮನೆ ಮೇಲೆ ಇಡೀ ದಾಳಿ ಕುರಿತು ಪತ್ರಕರ್ತರೊಂದಿಗೆ ಮಾತನಾಡಿದ್ದು ಈ ವೇಳೆ ಬಿಜೆಪಿಯವರು ವಾಷಿಂಗ್ ಯಂತ್ರದಲ್ಲಿ ಭ್ರಷ್ಟಾಚಾರಿಗಳನ್ನು ಹಾಕಿ ನಿರ್ಮಾದಿಂದ ತೊಳೆಯುತ್ತಾರೆ. ಬಿಜೆಪಿ ಸೇರಿದ ಕೂಡಲೇ ಅವರೆಲ್ಲರೂ ಪ್ರಾಮಾಣಿಕರಾಗಿ ಬಿಡುತ್ತಾರೆ. 25 ರಾಜಕಾರಣಿಗಳನ್ನು ಈ ರೀತಿ ಮಾಡಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.
ಅಜಿತ್ ಪವಾರ್ ಮೇಲೆ 60 ಸಾವಿರ ಕೋಟಿ ಆರೋಪ ಇದ್ದು ಅವರನ್ನು ಬಿಜೆಪಿಗೆ ಕರೆದುಕೊಂಡು ಬಂದರು. ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಅವರ ಮೇಲು ಆರೋಪ ಇದ್ದು ಇಬ್ಬರೂ ಕೂಡ ಬಿಜೆಪಿಗೆ ಹಣಕೊಟ್ಟು ಸೇರ್ಪಡೆಯಾದರು. ಪಪ್ಪಿ ಬಿಹಾರ ಚುನಾವಣೆಗೆ ದುಡ್ಡು ಕೊಟ್ಟಿಲ್ಲ. ಯಾರು ದುಡ್ಡು ಕೊಡುತ್ತಾರೋ ಅವರನ್ನು ಬಿಜೆಪಿಗೆ ಸೇರಿಸಿಕೊಳ್ಳುತ್ತಾರೆ. ಇಡೀ ಮಹಾರಾಷ್ಟ್ರ ಚುನಾವಣೆಗೆ ಅಜಿತ್ ಪವಾರ್ ಹಣ ಕೊಟ್ಟಿದ್ದಾರೆ, ಬಿಜೆಪಿಯವರೇ ಅಜಿತ್ ಪವಾರ್ ವಿರುದ್ಧ ಆರೋಪಗಳನ್ನು ಮಾಡಿದ್ದರು ಎಂದು ಹೇಳಿದರು.






















































