
ರಾಜ್ಯದಲ್ಲಿ ಕೇಳಿ ಬರುತ್ತಿರುವ ಮೂಡಾ ಹಗರಣ, ಸಂಬಂಧಿಸಿದಂತೆ ಸಿಎಂ ರಾಜೀನಾಮೆಯನ್ನು ಒತ್ತಾಯಿಸಿ ಇಂದು ಬಿಜೆಪಿ ಜೆಡಿಎಸ್ ಮೈಸೂರು ಚೆಲುೋ ಪಾದಯಾತ್ರೆ ಹಮ್ಮಿಕೊಂಡಿದೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಮೈಸೂರು ಚಲೋ ಪಾದಯಾತ್ರೆ, ಮುನ್ನ ಚಾಮುಂಡಿ ಬೆಟ್ಟದಲ್ಲಿ ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ಕಾಂಗ್ರೆಸ್ ಹಗರಣಗಳ ವಿರುದ್ಧ ಬಿಜೆಪಿ ಸಮರ ಸಾರಿದೆ. ನಮ್ಮ ಎಲ್ಲಾ ಕಾರ್ಯಕರ್ತರು ಪಾದಯಾತ್ರೆಗೆ ಬೇಕಾದ ಎಲ್ಲಾ ವ್ಯವಸ್ಥೆಗಳನ್ನು ಮಾಡಿಕೊಂಡಿದ್ದಾರೆ. ಪಾದಯಾತ್ರೆಯಲ್ಲಿ ನಿರೀಕ್ಷೆಗೂ ಮೀರಿದ ಜನ ಭಾಗಿಯಾಗಲಿದ್ದಾರೆ. ನಮ್ಮ ಹೋರಾಟ ಯಾವುದೇ ವ್ಯಕ್ತಿಯ ವಿರುದ್ಧವಲ್ಲ. ಭ್ರಷ್ಟಾಚಾರದ ವಿರುದ್ಧ ಎಂದು ಅವರು ತಿಳಿಸಿದ್ದಾರೆ. ಇನ್ನು ಪಾದಯಾತ್ರೆ ವಿಚಾರವಾಗಿ ಅನುಮತಿ ನೀಡುವಂತೆ ಕರ್ನಾಟಕ ಸರಕಾರಕ್ಕೆ ಹೈಕೋರ್ಟ್ ಮಧ್ಯಂತರ ಆದೇಶ ಹೊರಡಿಸಿದ್ದು, ಪೊಲೀಸ್ ಭದ್ರತೆ ಒದಗಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.











