
ಕೊಪ್ಪಳ: ಕಾರ್ಮಿಕ ಸಚಿವ ಸಂತೋಷ್ ಲಾಡ್, ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಕೇಂದ್ರ ಸರ್ಕಾರ ಐಸಿಯುನಲ್ಲಿದೆ. ಆದರೂ ಸಹ ಬಿಜೆಪಿ ನಾಯಕರು ರಾಜ್ಯದಲ್ಲಿ ಸಿಎಂ ಬದಲಾವಣೆ ಆಗುತ್ತಿದೆ ಎಂದು ಹೇಳುತ್ತಿದ್ದಾರೆ. ಬಿಜೆಪಿ ನಾಯಕರು ಸಿಎಂ ಬದಲಾವಣೆ ಸೇರಿದಂತೆ ರಾಜ್ಯ ಸರ್ಕಾರದ ಕುರಿತು ಮಾತನಾಡುವುದನ್ನು ಬಿಡಲಿ ಎಂದು ಕಿಡಿ ಕಾರಿದ್ದಾರೆ.
ಸಿಎಂ ಕುರ್ಚಿ ಬದಲಾವಣೆಯ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ನೋಡಿಕೊಳ್ಳುತ್ತದೆ. ರಾಜ್ಯದಲ್ಲಿ 136 ಶಾಸಕರೊಂದಿಗೆ ಸರ್ಕಾರ ಸುಭದ್ರವಾಗಿದೆ. ಸಿಎಂ ಬದಲಾವಣೆ ಕುರಿತು ಹೈಕಮಾಂಡ್ ಮಾತನಾಡದಂತೆ ಹೇಳಿರುವುದರಿಂದ ನಾನೇನು ಮಾತನಾಡುವುದಿಲ್ಲ. ಸುಖಾಸುಮ್ಮನೇ ಸಿಎಂ ಬದಲಾವಣೆ, ರಾಜ್ಯ ಉಸ್ತುವಾರಿ ಸುರ್ಜೇವಾಲ ಸೂಪರ್ ಸಿಎಂ ಎಂದೆಲ್ಲ ಆಡಿಕೊಳ್ಳುವುದನ್ನು ಬಿಡಬೇಕು. ತಮ್ಮ ಪಕ್ಷದಲ್ಲಿ ಏನೇನು ಆಗುತ್ತಿದೆ ಎನ್ನುವುದನ್ನು ಮೊದಲು ತಿಳಿದುಕೊಂಡು ಮಾತನಾಡಲಿ ಎಂದು ತಿರುಗೇಟು ನೀಡಿದ್ದಾರೆ.



















































