
ಬಿಜೆಪಿ ಮಾಜಿ ಸಚಿವ, ಹಾಲಿ ಶಾಸಕ ಎಸ್ ಸುರೇಶ್ ಕುಮಾರ್ ತೀವ್ರ ಜ್ವರದಿಂದ ಬಳಲುತ್ತಿದ್ದು ಆಸ್ಪತ್ರೆಗೆ ದಾಖಲಾಗಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇವರನ್ನು ಬೆಂಗಳೂರು ಶೇಷಾದ್ರಿಪುರಂನಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾಜಿ ಸಚಿವ ಸುರೇಶ್ ಕುಮಾರ್ ಅವರಿಗೆ ಮೆದುಳು ಜ್ವರ ತಗಲಿರುವ ಬಗ್ಗೆ ಮಾಹಿತಿಗಳು ಕೇಳಿ ಬರುತ್ತಿದೆ. ಇವರು ಮೂರು ನಾಲ್ಕು ದಿನಗಳಿಂದ ತೀವ್ರ ಜ್ವರಕ್ಕೆ ತುತ್ತಾಗಿದ್ದರು ಎನ್ನಲಾಗಿದೆ.


































