
ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ದೇವೇಂದ್ರ ಫಡ್ನವಿಸ್ ಅವರೇ ಮುಂದಿನ ಮಹಾರಾಷ್ಟ್ರ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ವರದಿಯಾಗಿದೆ.
ಸಂಪೂರ್ಣ ಸ್ಥಾನಮಾನ ಮತ್ತು ಪ್ರಭಾವದೊಂದಿಗೆ ದೇವೇಂದ್ರ ಫಡ್ನವೀಸ್ ಅವರು ಮಹಾರಾಷ್ಟ್ರ ರಾಜಕೀಯಕ್ಕೆ ಮರಳಿದ್ದು ಈಗ ಮಹಾರಾಷ್ಟ್ರದ ಅಧಿಕಾರ ಅವರ ಕೈಯಲ್ಲಿರುತ್ತದೆ. ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಅವರ ಹೆಸರನ್ನು ಅನುಮೋದಿಸಲಾಗಿದ್ದು ಮೂರನೇ ಬಾರಿಗೆ ಮಹಾರಾಷ್ಟ್ರದ ಸಿಎಂ ಆಗಲಿದ್ದಾರೆ.
ಐದು ವರ್ಷಗಳ ಅಧಿಕಾರಾವಧಿಯನ್ನು ಪೂರ್ಣಗೊಳಿಸಿದ ಬಿಜೆಪಿಯ ಏಕೈಕ ಮುಖ್ಯಮಂತ್ರಿ ಎಂಬ ಬಿರುದನ್ನು ಪಡೆದಿರುವ ದೇವೇಂದ್ರ ಫಡ್ನವಿಸ್ ಅವರು ತಮ್ಮ 44 ನೇ ವಯಸ್ಸಿನಲ್ಲಿ ಮಹಾರಾಷ್ಟ್ರದ ಎರಡನೇ ಅತಿ ಕಿರಿಯ ಮುಖ್ಯಮಂತ್ರಿ ಎಂಬ ದಾಖಲೆಯನ್ನು ಹೊಂದಿದ್ದಾರೆ.



















