
ನವದೆಹಲಿ: ಬಿಹಾರ ಚುನಾವಣೆಯಲ್ಲಿ ಎನ್ ಡಿಎ ಭರ್ಜರಿ ಗೆಲುವು ಸಾಧಿಸಿದ್ದು ಇದರಿಂದ ಕಾಂಗ್ರೆಸ್ ಭಾರೀ ಮುಖಭಂಗ ಅನುಭವಿಸಿದೆ. ಈ ಕುರಿತು ಪ್ರತಿಕ್ರಿಯಿಸಿದ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಬಿಹಾರ ವಿಧಾನಸಭಾ ಚುನಾವಣೆ ಆರಂಭದಿಂದಲೂ ನ್ಯಾಯಯುತವಾಗಿ ನಡೆದಿಲ್ಲ ಎಂದು ಗಂಭೀರ ಆರೋಪ ಮಾಡಿದ್ದಾರೆ.
243 ವಿಧಾನಸಭಾ ಕ್ಷೇತ್ರದಲ್ಲಿ ಎನ್‌ಡಿಎ 200ಕ್ಕೂ ಹೆಚ್ಚು ಸ್ಥಾನ ಗೆಲ್ಲುತ್ತಿದ್ದಂತೆ ಎಕ್ಸ್‌ನಲ್ಲಿ ಈ ಬಗ್ಗೆ ಪೋಸ್ಟ್ ಮಾಡಿರುವ ರಾಹುಲ್ ಗಾಂಧಿ ಫಲಿತಾಂಶವು ಆಶ್ಚರ್ಯಕರವಾಗಿದೆ, ಸಂವಿಧಾನ ಮತ್ತು ಪ್ರಜಾಪ್ರಭುತ್ವದ ರಕ್ಷಣೆಗಾಗಿ ನಮ್ಮ ಹೋರಾಟ ಮುಂದುವರಿಯಲಿದೆ. ಮಹಾಘಟಬಂಧನ್‌ಗೆ ಬೆಂಬಲಿಸಿದ ಬಿಹಾರದ ಲಕ್ಷಾಂತರ ಮತದಾರರಿಗೆ ಹೃತ್ಪೂರ್ವಕ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತೇನೆ. ಬಿಹಾರದಲ್ಲಿ ಈ ಫಲಿತಾಂಶ ನಿಜಕ್ಕೂ ಆಶ್ಚರ್ಯ ತಂದಿದ್ದು ಆರಂಭದಿಂದಲೂ ನ್ಯಾಯಯುತವಾಗಿ ನಡೆಯದ ಈ ಚುನಾವಣೆಯಲ್ಲಿ ನಾವು ಗೆಲುವು ಸಾಧಿಸಲು ಸಾಧ್ಯವಾಗಲಿಲ್ಲ ಎಂದು ಬರೆದು ಹಂಚಿಕೊಂಡಿದ್ದಾರೆ.






