ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಿನ್ನೆಲೆ ಪುನೀತ್ ಕೆರೆಹಳ್ಳಿ ಬಂಧನ, ತೀವ್ರ ಅಸ್ವಸ್ಥ ಗೊಂಡ ಹಿನ್ನಲೆ ಆಸ್ಪತ್ರೆಗೆ ದಾಖಲು

ಬೆಂಗಳೂರು: ರಾಜಸ್ಥಾನದಿಂದ ಬೆಂಗಳೂರು ಮೆಜೆಸ್ಟಿಕ್ ರೈಲ್ವೆ ನಿಲ್ದಾಣಕ್ಕೆ ನಾಯಿ ಮಾಂಸ ಸಾಗಾಟ ಮಾಡಲಾಗುತ್ತಿದೆ ಎಂದು ಪುನೀತ್ ಕೆರೆಹಳ್ಳಿ ಹಾಗೂ ಹಿಂದೂಪರ ಕಾರ್ಯಕರ್ತರು ಮೆಜೆಸ್ಟಿಕ್ ರೈಲು ನಿಲ್ದಾಣದ ಬಳಿ ಆರೋಪಿಸಿ ಪ್ರತಿಭಟನೆ ನಡೆಸಿದ್ದು,ಸ್ಥಳಕ್ಕೆ ಪೊಲೀಸರು ಹಾಗೂ ಆರೋಗ್ಯ ಸುರಕ್ಷತಾ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮಾಂಸದ ಮಾದರಿಗಳನ್ನು ಹೈದರಾಬಾದ್ ಪ್ರಯೋಗಾಲಯಕ್ಕೆ ಟೆಸ್ಟಿಂಗ್ ಆಗಿ ರವಾನಿಸಲಾಗಿದೆ. ಒಟ್ಟು ನಾಲ್ಕು ಬಾಕ್ಸ್ ಗಳಿಂದ ಸ್ಯಾಂಪಲ್ ಕಲೆಕ್ಟ್ ಮಾಡಲಾಗಿದ್ದು ಸ್ಯಾಂಪಲ್ ಗಳನ್ನು ವಿಸಿಕ್ಸ್ ಎನ್ನುವ ಲ್ಯಾಬ್ ಗೆ ರವಾನಿಸಿ ಪರೀಕ್ಷೆ ನಡೆಸಲಾಗುತ್ತದೆ. ಒಂದು ವೇಳೆ ದೂರುದಾರರ ದೂರಿನಂತೆ ನಾಯಿಮಾಂಸ ಆಗಿದ್ದರೆ ಮಾಲೀಕನ ಮೇಲೆ ಕ್ರಮ ಕೈಗೊಳ್ಳಲಾಗುತ್ತದೆ. ಇಲ್ಲವಾದಲ್ಲಿ ದೂರುದಾರರ ಮೇಲೆ ಕ್ರಮ ತೆಗೆದುಕೊಳ್ಳಲು ಕಾನೂನಿನಲ್ಲಿ ಅವಕಾಶವಿದೆ ಎಂದು ಆಹಾರ ಸುರಕ್ಷತಾ ಅಧಿಕಾರಿ ತಿಳಿಸಿದ್ದಾರೆ.
ಇದೆ ವೇಳೆ, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಹಿಂದೂ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಇವರನ್ನು ಬಂಧಿಸಲಾಗಿದ್ದು, ಪೊಲೀಸರ ವಿಚಾರಣೆ ವೇಳೆ ಹೊಟ್ಟೆ ನೋವಿನಿಂದ ತೀವ್ರ ಅಸ್ವಸ್ಥ ಗೊಂಡ ಇವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎನ್ನಲಾಗಿದೆ











